ಬಂಗಾಳವನ್ನು ಬಾಂಗ್ಲಾ ಅನ್ನಲ್ಲ: ದೀದಿ ಮನವಿಗೆ ಕೇಂದ್ರ ಬಗ್ಗಲಿಲ್ಲ!

Published : Jul 03, 2019, 05:44 PM IST
ಬಂಗಾಳವನ್ನು ಬಾಂಗ್ಲಾ ಅನ್ನಲ್ಲ: ದೀದಿ ಮನವಿಗೆ ಕೇಂದ್ರ ಬಗ್ಗಲಿಲ್ಲ!

ಸಾರಾಂಶ

ದೀದಿಗೆ ಮತ್ತೊಂದು ಶಾಕ್ ಕೊಟ್ಟ ಕೇಂದ್ರ ಸರ್ಕಾರ| ಪ.ಬಂಗಾದ ಹೆಸರು ಮರುನಾಮಕರಣಕ್ಕೆ ಕೇಂದ್ರ ನಿರಾಕರಣೆ| ರಾಜ್ಯದ ಹೆಸರನ್ನು ಬಾಂಗ್ಲಾ ಎಂದು ಮರುನಾಮಕರಣ ಮಾಡಲು ವಿರೋಧ| ಮರುನಾಮಕರಣ ಬಯಸಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದ ಟಿಎಂಸಿ ಸರ್ಕಾರ| 

ನವದೆಹಲಿ(ಜೂ.03): ಪಶ್ಚಿಮ ಬಂಗಾಳದ ಹೆಸರನ್ನು ಬಾಂಗ್ಲಾ ಎಂದು ಬದಲಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಈ ಮೂಲಕ ರಾಜ್ಯದ ಹೆಸರು ಬದಲಾಯಿಸಲು ಕೋರಿ ಟಿಎಂಸಿ ಸರ್ಕಾರ ಮಾಡಿದ್ದ ಮನವಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ.

ಪ.ಬಂಗಾಳಕ್ಕೆ ಬಾಂಗ್ಲಾ ಎಂದು ಮರುನಾಮಕರಣ ಮಾಡಬೇಕು ಎಂದು ಆಗ್ರಹಿಸಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ರಾಜ್ಯದ ಹೆಸರು ಬದಲಾಯಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ.

ಈ ಕುರಿತು ರಾಜ್ಯಸಭೆಗೆ ಮಾಹಿತಿ ನೀಡಿದ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ್ ರೈ, ಪ.ಬಂಗಾಳದ ಮರುನಾಮಕರಣ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ಕಳೆದ ವರ್ಷ ಪಶ್ಚಿಮ ಬಂಗಾಳ ವಿಧಾನಸಭೆ ರಾಜ್ಯದ ಹೆಸರನ್ನು 'ಬಾಂಗ್ಲಾ' ಎಂದು ಬದಲಾಯಿಸುವ ನಿರ್ಣಯವನ್ನು ಅಂಗೀಕರಿಸಿ, ಕೇಂದ್ರ ಗೃಹ ಸಚಿವಾಲಯಕ್ಕೆ ಅನುಮೋದನೆಗಾಗಿ ಕಳುಹಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಮೊದಲ ಹೈಡ್ರೋಜನ್‌ ಚಾಲಿತ ವಾಟರ್‌ ಟ್ಯಾಕ್ಸಿ ವಾರಾಣಸಿಯಲ್ಲಿ ಶುರು
ಎಐ ನಿರ್ಮಾತೃಗಳಿಗೆ 2025ರ ಟೈಮ್ ವರ್ಷದ ವ್ಯಕ್ತಿ ಗೌರವ!