ಪ್ರತ್ಯೇಕತಾವಾದಿಗಳೊಂದಿಗೆ ಮಾತುಕತೆ ಇಲ್ಲ: ಕೇಂದ್ರ ಸರ್ಕಾರ

By Suvarna Web DeskFirst Published Apr 28, 2017, 2:06 PM IST
Highlights

ಕಾಶ್ಮೀರ ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಬಹುದಾದ ವ್ಯಕ್ತಿಗಳ ಪಟ್ಟಿಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್, ಬಾರ್ ಅಸೋಸಿಯೇಶನ್ ಪದಾಧಿಕಾರಿಗಳಿಗೆ ಸೂಚಿಸಿತ್ತು.

ನವದೆಹಲಿ (ಏ. 28): ಜಮ್ಮು ಮತ್ತು ಕಾಶ್ಮೀರದಲ್ಲಿ ಕಿರುಗುಂಡುಗಳ ಬಳಕೆಯನ್ನು ತಡೆಯುವ ಕುರಿತು ಸಂಬಂಧಪಟ್ಟ ಎಲ್ಲರೊಂದಿಗೆ ಮಾತುಕತೆ ನಡೆಸಲು ಜಮ್ಮು ಕಾಶ್ಮೀರ ಹೈಕೋರ್ಟ್ ಬಾರ್ ಅಸೋಸಿಯೇಶನ್’ಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ, ಪ್ರತ್ಯೇಕತಾವಾದಿ ನಾಯಕರು ಹಾಗೂ ಆಝಾದಿ ಘೋಷಣೆಗಳನ್ನು ಕೂಗುವವರೊಂದಿಗೆ ಮಾತುಕತೆ ನಡೆಸುವುದಿಲ್ಲವೆಂದು ಸ್ಪಷ್ಟಪಡಿಸಿದೆ.

ಕಾಶ್ಮೀರ ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಬಹುದಾದ ವ್ಯಕ್ತಿಗಳ ಪಟ್ಟಿಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್, ಬಾರ್ ಅಸೋಸಿಯೇಶನ್ ಪದಾಧಿಕಾರಿಗಳಿಗೆ ಸೂಚಿಸಿತ್ತು.

ಆದರೆ ಪ್ರತ್ಯೇಕತಾವಾದಿ ಹಾಗೂ ಸ್ವಾತಂತ್ರ್ಯದ ಘೋಷಣೆಗಳನ್ನು ಕೂಗುವವರೊಂದಿಗೆ ಸರ್ಕಾರ ಮಾತುಕತೆ ನಡೆಸದು ಎಂದು ಅಟಾರ್ನಿ ಜನರಲ್ ಸುಪ್ರೀಂ ಕೋರ್ಟ್’ಗೆ ತಿಳಿಸಿದ್ದಾರೆ.

click me!