ಸಾಮಾಜಿಕ ಮಾಧ್ಯಮ ಉಸ್ತುವಾರಿ ಕೇಂದ್ರಕ್ಕೆ ಸುಪ್ರೀಂ ಗರಂ!

First Published Jul 13, 2018, 7:19 PM IST
Highlights

ಆನ್‌ಲೈನ್ ಮೇಲುಸ್ತುವಾರಿಗೆ ಮಾಧ್ಯಮ ಕೇಂದ್ರ

ಸಾಮಾಜಿಕ ಮಾಧ್ಯಮ ಕೇಂದ್ರಕ್ಕೆ ಸುಪ್ರೀಂ ಗರಂ

ಕೇಂದ್ರ ಸಕಾರ್ಕಾರದ ನಿಣರ್ಣಯಕ್ಕೆ ಸುಪ್ರೀಂ ವಿರೋಧ

ಕಣ್ಗಾವಲಿನ ಪರಿಸ್ಥಿತಿ ನಿರ್ಮಿಸಬೇಡಿ ಎಂದ ನ್ಯಾಯಾಲಯ

ಟಿಎಂಸಿ ನಾಯಕ ಮಹುವಾ ಮೊಯ್ಟ್ರಾ ಸಲ್ಲಿಸಿದ್ದ ಅರ್ಜಿ
 

ನವದೆಹಲಿ(ಜು.13): ಆನ್‌ಲೈನ್ ಅಂಕಿ ಅಂಶಗಳ ಮೇಲುಸ್ತುವಾರಿಗೆ ಸಾಮಾಜಿಕ ಮಾಧ್ಯಮ ಕೇಂದ್ರವನ್ನು ಸ್ಥಾಪಿಸುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. 

ಜನರನ್ನು ಸದಾ ಕಣ್ಗಾವಲಿನಲ್ಲಿ ಇಡಬೇಕಾದ ಪರಿಸ್ಥಿತಿಯನ್ನು ನಿರ್ಮಾಣ ಮಾಡಬೇಡಿ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದತ್ತ ಚಾಟಿ ಬೀಸಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ನ್ಯಾಯಮೂರ್ತಿಗಳಾದ ಎ.ಎಂ ಖನ್ವಿಲ್ಕರ್ ಮತ್ತು ಡಿ ವೈ ಚಂದ್ರಾಚೂಡ್ ಅವರನ್ನೊಳಗೊಂಡ ನ್ಯಾಯಪೀಠ, ಕೇಂದ್ರ ಸರ್ಕಾರಕ್ಕೆ ಈ ಸಂಬಂಧ ನೊಟೀಸ್ ಕಳುಹಿಸಿ ಎರಡು ವಾರಗಳೊಳಗೆ ಉತ್ತರಿಸುವಂತೆ ಹೇಳಿದೆ. 

ಸಾಮಾಜಿಕ ಮಾಧ್ಯಮ ಕೇಂದ್ರವನ್ನು ಸ್ಥಾಪಿಸುವ ಕೇಂದ್ರ ಸರ್ಕಾರದ ನಿರ್ಧಾರ ವಿರೋಧಿಸಿ ತೃಣಮೂಲ ಕಾಂಗ್ರೆಸ್ ಶಾಸಕ ಮಹುವಾ ಮೊಯ್ಟ್ರಾ ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯದ ವಿಭಾಗೀಯ ಪೀಠ ಈ ಮೇಲಿನಂತೆ ಅಭಿಪ್ರಾಯಪಟ್ಟಿದೆ. ಕೇಂದ್ರ ಸರ್ಕಾರ ಜನರ ವಾಟ್ಸಾಪ್ ಮೆಸೇಜ್‌ಗಳನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಸಾಮಾಜಿಕ ಜಾಲತಾಣ ಕೇಂದ್ರವನ್ನು ಸ್ಥಾಪಿಸುವ ಕೇಂದ್ರ ಸರ್ಕಾರದ ಕ್ರಮ ಸದಾ ಕಣ್ಗಾವಲಿನ ಪರಿಸ್ಥಿತಿಯನ್ನು ನಿರ್ಮಾಣ ಮಾಡಿದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮಗಳ ವಿಷಯಗಳನ್ನು ಸಂಗ್ರಹಿಸಿ ವಿಶ್ಲೇಷಿಸುವ ಸೋಷಿಯಲ್ ಮೀಡಿಯಾ ಕಮ್ಯೂನಿಕೇಷನ್ ಹಬ್‌ನ್ನು ಸ್ಥಾಪಿಸುವ ಕೇಂದ್ರ ಸರ್ಕಾರದ ನಿರ್ಣಯಕ್ಕೆ ತಡೆ ತರಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಜೂನ್ 18ರಂದು ನಿರಾಕರಿಸಿತ್ತು.

ದೇಶದ ಜನರ ಟ್ವಿಟ್ಟರ್, ಇನ್ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಇತರ ಇಮೇಲ್‌ಗಳ ಖಾತೆಗಳನ್ನು ಪತ್ತೆ ಹಚ್ಚಿ ಅವುಗಳಲ್ಲಿನ ವಿಷಯಗಳನ್ನು ಉಸ್ತುವಾರಿ ಮಾಡಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ದೂರಲಾಗಿದೆ.

click me!