
ನವದೆಹಲಿ(ಅ.10): ಹಬ್ಬ-ಹರಿದಿನಗಳ ಸಂದರ್ಭದಲ್ಲಿ ಉಗ್ರರ ದಾಳಿ ನಡೆಸುವ ಸಾಧ್ಯತೆಗಳಿದ್ದು ಈ ಕುರಿತಂತೆ ರಾಜ್ಯಗಳು ಎಚ್ಚರಿಕೆ ವಹಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.
ಜನನಿಭಿಡ ಪ್ರದೆಶಗಳಾದ ಮಾರುಕಟ್ಟೆ, ರೈಲ್ವೇ ನಿಲ್ದಾಣ, ಬಸ್ ನಿಲ್ದಾಣ, ಧಾರ್ಮಿಕ ಕೆಂದ್ರಗಳ ಮೇಲೆ ಉಗ್ರರು ದಾಳಿ ನಡೆಸುವ ಹಾಗೆಯೇ ಕೋಮು ಸಾಮರಸ್ಯ ಕದಡುವಂತ ವಾತಾವರಣ ಸೃಷ್ಟಿಯಾಗುವ ಸಾಧ್ಯತೆಗಳಿವೆ ಎಂಬ ಗುಪ್ತಚರ ಇಲಾಖೆಯ ಮಾಹಿತಿ ಆಧರಿಸಿ ಇಂತಹ ಸ್ಥಳಗಳಲ್ಲಿ ಹೆಚ್ಚವರಿ ರಕ್ಷಣಾ ತಂಡಗಳನ್ನು ನಿಯೋಜಿಸಬೇಕೆಂದು ಕೇಂದ್ರ ಗೃಹಸಚಿವಾಲಯ ಎಲ್ಲಾ ರಾಜ್ಯಗಳಿಗೂ ಸೂಚಿಸಿದೆ.
ಸರ್ಜಿಕಲ್ ದಾಳಿಗೆ ಪ್ರತಿಕಾರವಾಗಿ ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಹೊಂಚುಹಾಕುತ್ತಿದ್ದು ಜನನಿಭಿಡ ಪ್ರದೇಶಗಳಲ್ಲಿ ಶಾಂತಿ ಕದಡುವ ಸಾಧ್ಯತೆಯಿದೆ ಎಂದು ಗುಪ್ತಚರ ಇಲಾಖೆ ಕೇಂದ್ರಕ್ಕೆ ಎಚ್ಚರಿಕೆ ನೀಡಿತ್ತು.
ದಸರಾ, ದುರ್ಗಾ ಪೂಜೆ, ಮೊಹರಮ್ ಹಬ್ಬಗಳಿರುವುದರಿಂದ ದೇಶದ ಪ್ರಮುಖ ನಗರಗಳಾದ ಡೆಲ್ಲಿ, ಮುಂಬೈ, ಕೋಲ್ಕತಾ, ಚೆನ್ನೈ, ಬೆಂಗಳೂರು ಹಾಗೂ ಹೈದರಾಬಾದ್'ನಲ್ಲಿ ಹೆಚ್ಚು ಕಟ್ಟೆಚ್ಚರ ವಹಿಸಬೇಕು ಎಂದು ಗೃಹಸಚಿವಾಲಯ ತನ್ನ ಸುತ್ತೋಲೆಯಲ್ಲಿ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.