
ನ್ಯೂಯಾರ್ಕ್: ದೇಶದ ಪ್ರತೀ ನಾಗರಿಕರಿಗೂ ಪಾಸ್‌ಪೋರ್ಟ್ ಸೇವೆ ಸುಲಭವಾಗಿ ಲಭ್ಯವಾಗುವಂತೆ ನೋಡಿಕೊಳ್ಳಲು ಮುಂದಿನ ವರ್ಷದ ಮಾರ್ಚ್ ತಿಂಗಳೊಳಗೆ ದೇಶದ 543 ಲೋಕಸಭೆ ಕ್ಷೇತ್ರಗಳಲ್ಲಿಯೂ ‘ಪಾಸ್‌ಪೋರ್ಟ್ ಸೇವಾ ಕೇಂದ್ರ’ಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಇಲ್ಲಿನ ಭಾರತೀಯ ರಾಯಭಾರಿ ಕಚೇರಿಯಲ್ಲಿ ಪಾಸ್‌ಪೋರ್ಟ್ ಸೇವಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ವಿದೇಶಾಂಗ ಸಚಿವಾಲಯದ ರಾಜ್ಯ ಸಚಿವ ವಿ.ಕೆ. ಸಿಂಗ್, ‘ಭಾರತ ಅಥವಾ ವಿದೇಶಗಳಲ್ಲಿ ಭಾರತೀಯರು ಪಾಸ್‌ಪೋರ್ಟ್ ಪಡೆದುಕೊಳ್ಳಲು ಯಾವುದೇ ರೀತಿಯ ಸಮಸ್ಯೆ ಎದುರಿಸದಂತೆ ಮಾಡಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ.
ಇದರ ಭಾಗವಾಗಿ ದೇಶದಲ್ಲಿರುವ 543 ಲೋಕಸಭಾ ಕ್ಷೇತ್ರಗಳಲ್ಲಿಯೂ 2019ರ ಮಾಚ್‌ರ್‍ನೊಳಗೆ ಪಾಸ್‌ಪೋರ್ಟ್ ಸೇವಾ ಕೇಂದ್ರ ಸ್ಥಾಪಿಸಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ,’ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ