
ಹೈದರಾಬಾದ್: ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿನಿತ್ಯ ಏರಿಕೆಯಾಗುತ್ತಿರುವ ವಿಚಾರವಾಗಿ ಬಿಜೆಪಿ ರಾಷ್ಟ್ರೀ ಯ ಅಧ್ಯಕ್ಷ ಅಮಿತ್ ಶಾ ಇದೇ ಮೊದಲ ಬಾರಿಗೆ ಮೌನ ಮುರಿದಿದ್ದಾರೆ.
ಅಂತಾರಾಷ್ಟ್ರೀಯ ಮಾರು ಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ ಹಾಗೂ ರುಪಾ ಯಿ ಮೌಲ್ಯ ಕುಸಿತದಿಂದಾಗಿ ದರ ಹೆಚ್ಚಾಗುತ್ತಿದೆ. ಇದಕ್ಕೆ ಶೀಘ್ರದಲ್ಲೇ ಕೇಂದ್ರ ಸರ್ಕಾರ ಪರಿಹಾರ ಹುಡುಕಲಿದೆ ಎಂದು ಅವರು ತಿಳಿಸಿದ್ದಾರೆ. ತೈಲ ಬೆಲೆ ಹೆಚ್ಚಳ, ರುಪಾಯಿ ದರ ಕುಸಿತ ವಿಚಾ ರಗಳು ಬಿಜೆಪಿ ಹಾಗೂ ಕೇಂದ್ರ ಸರ್ಕಾರ ಎರಡರ ಚಿಂತೆಗೂ ಕಾರಣವಾಗಿದೆ. ಜಾಗತಿಕವಾಗಿ ನಡೆಯು ತ್ತಿರುವ ಬೆಳವಣಿಗೆಗಳು ಇದಕ್ಕೆ ಕಾರಣ.
ಅಮೆರಿಕ ಹಾಗೂ ಚೀನಾ ನಡುವಣ ವ್ಯಾಪಾರ ಸಮರ, ಅಮೆರಿಕ ಹಾಗೂ ತೈಲು ಉತ್ಪಾದಕ ರಾಷ್ಟ್ರಗಳ ನಡುವೆ ಇರುವ ವಿವಾದಗಳಿಂದಾಗಿ ಇಂತಹ ಬೆಳವಣಿ ಗೆಗಳು ನಡೆಯುತ್ತಿವೆ. ಶೀಘ್ರದಲ್ಲೇ ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಒಂದು ಪರಿಹಾರ ದೊಂದಿಗೆ ಬರಲಿದೆ. ಇತರೆ ದೇಶಗಳ ಕರೆನ್ಸಿಗಳಿಗೆ ಹೋಲಿಸಿದರೆ ರುಪಾಯಿ ಮೇಲಿನ ಪರಿಣಾಮ ತೀರಾ ಕಡಿಮೆ ಇದೆ ಎಂದು ಹೇಳಿದರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.