
ಬೆಂಗಳೂರು(ಮೇ.08): ಈ ಬಾರಿಯ ಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಭೌತಶಾಸ್ತ್ರ ಮತ್ತು ರಸಾಯ ನಶಾಸ್ತ್ರ ವಿಷಯಗಳಲ್ಲಿ ತಲಾ ಒಂದು ಗ್ರೇಸ್ ಅಂಕ ಸಿಗಲಿದೆ. ಎರಡೂ ಪ್ರಶ್ನೆ ಪತ್ರಿಕೆಗಳಲ್ಲಿ ತಲಾ ಒಂದು ಪ್ರಶ್ನೆಯನ್ನು ಅಸ್ಪಷ್ಟವಾಗಿ ಕೇಳಲಾಗಿದ್ದ ಕಾರಣ ತಜ್ಞರ ಸಲಹೆಯಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2 ಗ್ರೇಸ್ ಅಂಕ ನೀಡಲಿದೆ.ಎರಡೂ ಪ್ರಶ್ನೆ ಪತ್ರಿಕೆಗಳಲ್ಲಿ ತಲಾ ಒಂದು ಪ್ರಶ್ನೆಯನ್ನು ಅಸ್ಪಷ್ಟವಾಗಿ ಕೇಳಲಾಗಿದ್ದ ಕಾರಣ ತಜ್ಞರ ಸಲಹೆಯಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2 ಗ್ರೇಸ್ ಅಂಕ ನೀಡಲಿದೆ. ಭೌತ ಶಾಸ್ತ್ರ ವಿಷಯದ ಪರೀಕ್ಷೆಯಲ್ಲಿ ಮೊದಲನೇ ಪ್ರಶ್ನೆ ಮತ್ತು ರಸಾಯನಶಾಸ್ತ್ರ ಪರೀಕ್ಷೆಯ 48ನೇ ಪ್ರಶ್ನೆಗೆ ಈ ಗ್ರೇಸ್ ಅಂಕ ದೊರೆತಿದೆ. ಈ ಎರಡೂ ಪ್ರಶ್ನೆಗಳು ಕೊಂಚ ಉದ್ದ ಹಾಗೂ ಅಸ್ಪಷ್ಟತೆಯಿಂದ ಕೂಡಿದ್ದವು, ಇದರಿಂದ ಉತ್ತರ ಬರೆಯಲು ಗೊಂದಲ ಉಂಟಾಗಿದ್ದಾಗಿ ವಿದ್ಯಾರ್ಥಿಗಳು ಮತ್ತು ಕಾಲೇಜು ಉಪನ್ಯಾಸಕರಿಂದ ಆಕ್ಷೇಪಗಳು ಕೇಳಿಬಂದಿದ್ದವು.
ಈ ಆಕ್ಷೇಪದ ಹಿನ್ನೆಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ತಜ್ಞ ರೊಂದಿಗೆ ಚರ್ಚೆ ನಡೆಸಿದರು. ಗ್ರೇಸ್ ಅಂಕ ನೀಡುವ ಮಾಹಿತಿಯನ್ನು ಪ್ರಾಧಿಕಾರ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ತಾತ್ಕಾಲಿಕ ಸರಿ ಉತ್ತರದಲ್ಲೂ ನೀಡಲಾಗಿದೆ ಎಂದು ಪ್ರಾಧಿ ಕಾರದ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.