
ಬೆಂಗಳೂರು(ಮೇ.21): ಬರ ಅಧ್ಯಯನಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದನ್ನು ಸಹಿಸದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಬರ ಅಧ್ಯಯನದ ಬಗ್ಗೆ ಟೀಕಿಸಿಸುತ್ತಿದ್ದಾರೆ. ಬಿಜೆಪಿ ಹಮ್ಮಿಕೊಂಡಿ ರುವ ಬರ ಅಧ್ಯಯನ ಕುರಿತು ಟೀಕಿಸುವ ಮುಖ್ಯಮಂತ್ರಿಗಳು ವಾಸ್ತವ ಪರಿಸ್ಥಿತಿ ಅರಿತುಕೊಳ್ಳಲಿ ಎಂದು ಬಿಜೆಪಿ ರಾಜ್ಯಾ ಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಬರ ಪ್ರವಾಸಕ್ಕೆ ಹೋದ ಪ್ರದೇಶಗಳಲ್ಲಿ ಜಾನುವಾರುಗಳಿಗೆ ಮೇವು, ನೀರು ಸಿಗುತ್ತಿಲ್ಲ. ಗೋಶಾಲೆಗಳಲ್ಲಿ ರಾತ್ರಿ ವೇಳೆ ಉಳಿದುಕೊಳ್ಳುವ ರೈತರಿಗೆ ಊಟದ ವ್ಯವಸ್ಥೆ ಮಾಡುವ ಯೋಗ್ಯತೆ ಮುಖ್ಯಮಂತ್ರಿಗಳಿಗಿಲ್ಲ ಎಂದು ಟೀಕಿಸಿದರು.
ಜನ ಸಂಪರ್ಕ ಅಭಿಯಾನ ಮುಗಿವಷ್ಟರಲ್ಲಿ ಸಾಲ ಮನ್ನಾ ಮಾಡದಿದ್ದರೆ 4 ಲಕ್ಷ ರೈತರೊಂ ದಿಗೆ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಸರ್ಕಾ ರದ ಮೇಲೆ ಒತ್ತಡ ತಂದು ಸಾಲ ಮನ್ನಾ ಮಾಡಿಸದಿದ್ದರೆ ನನ್ನ ಹೆಸರು ಬಿ.ಎಸ್. ಯಡಿಯೂರಪ್ಪನೇ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.
ಪಟ್ಟಣದಲ್ಲಿ ಜನಸಂಪರ್ಕ ಅಭಿಯಾನ ಉದ್ಘಾಟಿಸಿ ಮಾತನಾಡಿ, ಸಹಕಾರಿ ಬ್ಯಾಂಕ್‌ಗಳಲ್ಲಿರುವ ರೈತರ ಸಾಲಮನ್ನಾ ಮಾಡಲು ಸಿದ್ದರಾಮಯ್ಯ ಅವರಿಗೆ ಗಡುವು ನೀಡಿದ್ದೇನೆ. ರಾಜ್ಯದಲ್ಲಿ ಭೀಕರ ಬರ ಇದ್ದರೂ ಸರ್ಕಾರ ರೈತರ ನೆರವಿಗೆ ಬರುತ್ತಿಲ್ಲ. ಕೇಂದ್ರ ಸರ್ಕಾರದ ಕಡೆಗೆ ಬೆರಳು ಮಾಡುತ್ತಿದೆ ಎಂದು ದೂರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.