ದೇಶದ ಆರ್ಥಿಕತೆಯಿಂದ 2000 ರು. ನೋಟು ವಾಪಸ್‌ಗೆ ಒತ್ತಾಯ

By Web DeskFirst Published Sep 6, 2018, 2:04 PM IST
Highlights

ದೇಶದಲ್ಲಿ ನೋಟು ಅಮಾನ್ಯೀಕರಣದ ಬಳಿಕ ಪರಿಚಯಿಸಲಾದ 2000 ರು. ನೋಟುಗಳನ್ನು ಆರ್ಥಿಕತೆಯಿಂದ ವಾಪಸ್ ಪಡೆಯಬೇಕು ಎಂದು ಆಂಧ್ರ ಪ್ರದೇಶ ಸಿಎಂ ಚಂದ್ರ ಬಾಬು ನಾಯ್ಡು ಆಗ್ರಹಿಸಿದ್ದಾರೆ. 

ಅಮರಾವತಿ : ನೋಟು ಅಮಾನ್ಯೀಕರಣದ ಬಳಿಕ ದೇಶದಲ್ಲಿ ಜಾರಿಯಾದ ನೂತನ 2000 ರು. ನೋಟುಗಳ ಬಗ್ಗೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರ ಬಾಬು ನಾಯ್ಡು ಅಸಮಾಧಾನ ವ್ಯಕ್ತಪಡಿಸಿದ್ದು, ನೋಟುಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.  

ದೇಶದ ಆರ್ಥಿಕತೆಯಿಂದ 2000 ರು. ನೋಟುಗಳನ್ನು ವಾಪಸ್ ಪಡೆಯಬೇಕು. ದೇಶದಲ್ಲಿ ಡಿಜಿಟಲ್ ಕರೆನ್ಸಿ ಹೆಚ್ಚು  ಪರಿಣಾಮಕಾರಿಯಾಗಿದ್ದು ಸರ್ಕಾರ ಸೂಕ್ತ ರೀತಿಯಲ್ಲಿ ಜಾರಿ ಮಾಡಲಿಲ್ಲ ಎಂದು ಹೇಳಿದ್ದಾರೆ. 

ಇನ್ನು ಇದೇ ವೇಳೆ ಅಮರಾವತಿ ಅಭಿವೃದ್ಧಿ ಬಗ್ಗೆ ಮಾಹಿತಿ ನೀಡಿದ ಅವರು ಕೇಂದ್ರ ಸರ್ಕಾರದ ವಿರುದ್ಧವೂ ಕೂಡ ವಾಗ್ದಾಳಿ ನಡೆಸಿದ್ದಾರೆ. 

ರಾಜ್ಯಕ್ಕೆ ಸೂಕ್ತ ಪ್ರಮಾಣದಲ್ಲಿ ಹಣವನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಸೂಕ್ತ ತಾರತಮ್ಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

click me!