ದೇವೇಗೌಡ ನಿವಾಸಕ್ಕೆ ಚಂದ್ರಬಾಬು ನಾಯ್ಡು!

By Web DeskFirst Published 22, May 2019, 9:25 AM IST
Highlights

ದೇವೇಗೌಡ ನಿವಾಸಕ್ಕೆ ಚಂದ್ರಬಾಬು ನಾಯ್ಡು!| ನಿನ್ನೆ ರಾತ್ರಿ ಬೆಂಗಳೂರಿನ ಪದ್ಮನಾಭನಗರದ ನಿವಾಸದಲ್ಲಿ ಭೇಟಿ, ಚರ್ಚೆ

ಬೆಂಗಳೂರು[ಮೇ.22]: ಲೋಕಸಭಾ ಚುನಾವಣೆಯ ಬಳಿಕ ಚುನಾವಣೋತ್ತರ ಸಮೀಕ್ಷೆಗಳು ಬಹಿರಂಗಗೊಳ್ಳುತ್ತಿದ್ದಂತೆ ಎನ್ ಡಿಎಯೇತರ ಪಕ್ಷಗಳು ರಣತಂತ್ರದಲ್ಲಿ ತೊಡಗಿದ್ದು, ಟಿಡಿಪಿ ಮುಖ್ಯಸ್ಥ ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದರು

ಪದ್ಮನಾಭನಗರದಲ್ಲಿನ ದೇವೇಗೌಡರ ನಿವಾಸಕ್ಕೆ ಮಂಗಳವಾರ ರಾತ್ರಿ ಆಗಮಿಸಿದ ಚಂದ್ರಬಾಬು ನಾಯ್ಡು ರಾಷ್ಟ್ರ ರಾಜಕಾರಣ ಕುರಿತು ಸಮಾಲೋಚನೆ ನಡೆಸಿದರು. ಈ ವೇಳೆ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಹ ಇದ್ದರು.

ಎನ್‌ಡಿಎಯೇತರ ಪಕ್ಷಗಳನ್ನು ಅಧಿಕಾರದಿಂದ ದೂರವಿಡಲು ಹೆಣೆಯಬಹುದಾದ ರಾಜಕೀಯ ರಣತಂತ್ರಗಳ ಬಗ್ಗೆ ಮಾತುಕತೆ ನಡೆಸಿದರು. ಚುನಾ ವಣೋತ್ತರ ಸಮೀಕ್ಷೆಗಳು ಎನ್‌ಡಿಎ ಪರವಾಗಿ ಇರುವ ಹಿನ್ನೆಲೆಯಲ್ಲಿ ತೃತೀಯ ರಂಗ ಶಕ್ತಿಗಳ ಮುಂ ದಿನ ನಡೆಯುವ ಯಾವ ರೀತಿಯಲ್ಲಿರಬೇಕು ಎಂಬು ದರ ಬಗ್ಗೆ ಉಭಯ ನಾಯಕರು ಸಮಾಲೋಚನೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

ಬಿಜೆಪಿಗೆ ಅಧಿಕಾರ ಸಿಗಬಾರದು ಎಂದು ಶತಾಯಗತಾಯವಾಗಿ ಎನ್‌ಡಿಎಯೇತರ ಪಕ್ಷಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಚಂದ್ರಬಾಬು ನಾಯ್ಡು ಅವರು ಇತ್ತೀಚೆಗೆ ಕಾಂಗ್ರೆಸ್‌ನ ಅಧಿನಾಯಕರಾದ ರಾಹುಲ್ ಗಾಂಧಿ, ಸೋನಿಯಾಗಾಂಧಿ, ಎಸ್‌ಪಿ ನಾಯಕ ಅಖಿಲೇಶ್ ಯಾದವ್, ಬಿಎನ್‌ಪಿ ನಾಯಕಿ ಮಾಯಾವತಿ ಹಾಗೂ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥರಾಗಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ಇದೀಗ ಬೆಂಗಳೂರಿಗೆ ಆಗಮಿಸಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನು ಭೇಟಿಯಾಗಿದ್ದಾರೆ. ಭೇಟಿ ವೇಳೆಯ ಇತರೆ ನಾಯಕರ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಫಲಿತಾಂಶದ ಬಳಿಕ ಮುಂದಿನ ನಡೆಯ ಕುರಿತು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ

Last Updated 22, May 2019, 9:25 AM IST