ಚಂದ್ರಯಾನ-2 ಉಡಾವಣೆ ಮುಂದಕ್ಕೆ

By Suvarna Web DeskFirst Published Mar 24, 2018, 8:39 AM IST
Highlights

ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ ‘ಇಸ್ರೋ’ದ ಮಹತ್ವಾಕಾಂಕ್ಷಿ ‘ಚಂದ್ರಯಾನ-2’ ಉಡಾವಣಾ ಯೋಜನೆ ಅಕ್ಟೋಬರ್‌ಗೆ ಮುಂದೂಡಲಾಗಿದೆ. ಮುಂದಿನ ತಿಂಗಳು ನಡೆಯಬೇಕಿದ್ದ ಉಡಾವಣೆ ಅಕ್ಟೋಬರ್‌ಗೆ ಮುಂದೂಡಲ್ಪಟ್ಟಿದೆ ಎಂದು ಇಸ್ರೋ ಅಧ್ಯಕ್ಷ ಕೆ. ಶಿವನ್‌ ಶುಕ್ರವಾರ ತಿಳಿಸಿದ್ದಾರೆ.

ಚೆನ್ನೈ (ಮಾ.24):  ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ ‘ಇಸ್ರೋ’ದ ಮಹತ್ವಾಕಾಂಕ್ಷಿ ‘ಚಂದ್ರಯಾನ-2’ ಉಡಾವಣಾ ಯೋಜನೆ ಅಕ್ಟೋಬರ್‌ಗೆ ಮುಂದೂಡಲಾಗಿದೆ. ಮುಂದಿನ ತಿಂಗಳು ನಡೆಯಬೇಕಿದ್ದ ಉಡಾವಣೆ ಅಕ್ಟೋಬರ್‌ಗೆ ಮುಂದೂಡಲ್ಪಟ್ಟಿದೆ ಎಂದು ಇಸ್ರೋ ಅಧ್ಯಕ್ಷ ಕೆ. ಶಿವನ್‌ ಶುಕ್ರವಾರ ತಿಳಿಸಿದ್ದಾರೆ.

‘ತಜ್ಞರು ಇತ್ತೀಚೆಗೆ ಭೇಟಿಯಾಗಿ ಕೆಲವೊಂದು ಪರೀಕ್ಷೆಗಳನ್ನು ನಡೆಸುವುದರ ಬಗ್ಗೆ ಸಲಹೆಗಳನ್ನು ನೀಡಿರುವ ಹಿನ್ನೆಲೆಯಲ್ಲಿ ಯೋಜನೆ ಮುಂದೂಡಲ್ಪಟ್ಟಿದೆ’ ಎಂದು ಅವರು ತಿಳಿಸಿದ್ದಾರೆ.

ಚಂದ್ರನ ದಕ್ಷಿಣ ಧ್ರುವದಲ್ಲಿ ರೋವರ್‌ ಇಳಿಸಲಿರುವ ಇಸ್ರೋದ ಚಂದ್ರಯಾನ-2 ಏಪ್ರಿಲ್‌ನಲ್ಲಿ ಉಡಾವಣೆಯಾಗಲಿದೆ ಎಂದು ಫೆಬ್ರವರಿಯಲ್ಲಿ ಪ್ರಧಾನಿ ಸಚಿವಾಲಯದ ರಾಜ್ಯ ಸಚಿವ, ಬಾಹ್ಯಾಕಾಶ ವಿಭಾಗದ ಉಸ್ತುವಾರಿ ಜಿತೇಂದ್ರ ಸಿಂಗ್‌ ಕೂಡ ಹೇಳಿದ್ದರು.

click me!