ಕರ್ನಾಟಕದ ಅತೀ ಪ್ರತಿಷ್ಠೆ ಹಾಗೂ ಪ್ರಭಲ ಕ್ಷೇತ್ರವಾದ ಇಲ್ಲಿ ಕಾಂಗ್ರೆಸ್-ಜೆಡಿಎಸ್ ಒಳ ಒಪ್ಪಂದ

By Suvarna Web DeskFirst Published Feb 27, 2018, 12:35 PM IST
Highlights

ಬೊಂಬೆಗಳಿಂದಾಗಿ ವಿಶ್ವಾದ್ಯಂತ ಖ್ಯಾತಿ ಪಡೆದಿರುವ ಚನ್ನಪಟ್ಟಣ ಇತ್ತೀಚಿನ ವರ್ಷಗಳಲ್ಲಿ ರಾಜಕೀಯವಾಗಿಯೂ ಸದ್ದು ಮಾಡುತ್ತಿದೆ. ಜೆಡಿಎಸ್, ಕಾಂಗ್ರೆಸ್ ನಡುವಣ ಜಿದ್ದಾಜಿದ್ದಿ ಅಖಾಡವಾಗಿದ್ದ ಈ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಎರಡೂ ಪಕ್ಷಗಳಿಗೆ ಟಾಂಗ್ ನೀಡಲು ಹೊರಟಿದೆ.

ಚನ್ನಪಟ್ಟಣ : ಬೊಂಬೆಗಳಿಂದಾಗಿ ವಿಶ್ವಾದ್ಯಂತ ಖ್ಯಾತಿ ಪಡೆದಿರುವ ಚನ್ನಪಟ್ಟಣ ಇತ್ತೀಚಿನ ವರ್ಷಗಳಲ್ಲಿ ರಾಜಕೀಯವಾಗಿಯೂ ಸದ್ದು ಮಾಡುತ್ತಿದೆ. ಜೆಡಿಎಸ್, ಕಾಂಗ್ರೆಸ್ ನಡುವಣ ಜಿದ್ದಾಜಿದ್ದಿ ಅಖಾಡವಾಗಿದ್ದ ಈ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಎರಡೂ ಪಕ್ಷಗಳಿಗೆ ಟಾಂಗ್ ನೀಡಲು ಹೊರಟಿದೆ. ಕಳೆದ ಬಾರಿ ಸಮಾಜವಾದಿ ಪಕ್ಷದಿಂದ ಆಯ್ಕೆಯಾಗಿದ್ದ ಸಿ.ಪಿ. ಯೋಗೇಶ್ವರ್ ಈ ಬಾರಿ ಬಿಜೆಪಿ ಸೇರಿದ್ದು, ಸ್ಪರ್ಧೆಗೆ ಸಜ್ಜಾಗಿದ್ದಾರೆ.

ಜೆಡಿಎಸ್‌ನಿಂದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಪತ್ನಿ ಅನಿತಾರನ್ನು ಕಣಕ್ಕಿಳಿಸುವ ಪ್ರಯತ್ನ ನಡೆಯುತ್ತಿದೆ. ಕಾಂಗ್ರೆಸ್‌ನಿಂದ ಪ್ರಬಲರನ್ನು ಕಣಕ್ಕಿಳಿಸಲು ಡಿಕೆಶಿ ಹಾಗೂ ಡಿಕೆಸು ಯತ್ನಿಸುತ್ತಿದ್ದಾರೆ. ಮೇಲ್ಮನೆ ಸದಸ್ಯ ಪುಟ್ಟಣ್ಣ ಅವರನ್ನು ಅಭ್ಯರ್ಥಿಯನ್ನಾಗಿಸುವ ಯತ್ನವೂ ನಡೆದಿದೆ.

ಇದಲ್ಲದೆ ಸಂಸದ ಡಿ.ಕೆ. ಸುರೇಶ್ ಹಾಗೂ ಅವರ ಸಂಬಂಧಿ ಶರತ್ ಚಂದ್ರ ಹೆಸರೂಗಳು ಕೇಳಿಬರುತ್ತಿವೆ. ಕಾಂಗ್ರೆಸ್, ಜೆಡಿಎಸ್ ಒಳ ಒಪ್ಪಂದದ ಬಗ್ಗೆಯೂ ಗುಸುಗುಸು ಇದೆ. ಈ ಕ್ಷೇತ್ರದಲ್ಲಿ ಮಹಿಳಾ ಮತದಾರರು ಹೆಚ್ಚಿದ್ದಾರೆ.

click me!