
ನಾಗಮಂಗಲ[ಮೇ 26] : ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಚೆಲುವರಾಯ ಸ್ವಾಮಿ ಮುಂಬರುವ ಯಾವ ಚುನಾವಣೆ ಗಳಲ್ಲಿಯೂ ತಾವು ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿಕೊಂಡಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಗಮಂಗಲ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಪರಾಜಿತ ಗೊಂಡಿರುವ ಅವರು ಇದೀಗ ಈ ಹೇಳಿಕೆಯನ್ನು ನೀಡಿದ್ದಾರೆ.
ಸಂಸತ್ ಉಪ ಉಪ ಚುನಾವಣೆ, ಸಾರ್ವತ್ರಿಕ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ. ನಾಗಮಂಗಲ ಕ್ಷೇತ್ರದಲ್ಲಿ ಜನಪ್ರತಿನಿಧಿಯಾಗಿರುವ ಅಥವಾ ಕೆಲಸ ಮಾಡುವ ಯೋಗ್ಯತೆ ನನಗಿಲ್ಲ. ನನಗೆ ಮತ ನೀಡಿರುವ, ನೀಡದಿರುವ ಎಲ್ಲಾ ಮತದಾರರಿಗೂ ಕೃತಜ್ಞತೆ ಎಂದು ಹೇಳಿದ್ದಾರೆ.
ಅಲ್ಲದೇ ಕಾಂಗ್ರೆಸ್ ಪಕ್ಷದ ಜಿಲ್ಲಾ ನಾಯಕತ್ವವೂ ನನಗೆ ಬೇಡ. ನಾನೊಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದಲ್ಲಿ ಮುಂದು ವರೆಯುತ್ತೇನೆ ಎಂದು ನಾಗಮಂಗಲದಲ್ಲಿ ಚೆಲುವರಾಯಸ್ವಾಮಿ ಹೇಳಿದರು.
ಇದೇ ವೇಳೆ ಮೈತ್ರಿ ಸರ್ಕಾರದ ಬಗ್ಗೆಯೂ ಕೂಡ ಪ್ರಸ್ತಾಪ ಮಾಡಿದ್ದು, ಯಾರೂ ಕೂಡ ಏಕಪಕ್ಷೀಯವಾದ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಈಗ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ ಎಂದಿದ್ದಾರೆ. ಆದರೆ ವೈಯಕ್ತಿಕವಾಗಿ ಕುಮಾರಸ್ವಾಮಿ ಅವರ ಬಳಿ ಹೊಂದಾಣಿಕೆಯ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.