
ಚೆನ್ನೈ: ಮುಟ್ಟಿನ ದಿನಗಳಲ್ಲಿ ಮಹಿಳೆಯರು ಬಳಸುವ ಸ್ಯಾನಿಟರಿ ನ್ಯಾಪಕಿನ್ ಕುರಿತು ಅರಿವು ಮೂಡಿಸುವ ‘ಪ್ಯಾಡ್‌ಮ್ಯಾನ್’ ಚಿತ್ರ ಬಿಡುಗಡೆಯಾದ ಬೆನ್ನಲ್ಲೇ, ತಮಿಳುನಾಡಿನ ಪ್ರಖ್ಯಾತ ಸತ್ಯಂ ಸಿನಿಮಾಸ್ ತನ್ನ ಎಲ್ಲಾ ಚಿತ್ರಮಂದಿರಗಳಲ್ಲಿ ಉಚಿತ ನ್ಯಾಪ್’ಕಿನ್ ವಿತರಿಸಲು ನಿರ್ಧರಿಸಿದೆ.
ಮೊದಲ ಹಂತದಲ್ಲಿನ ಚೆನ್ನೈನಲ್ಲಿನ ಚಿತ್ರಮಂದಿರದಲ್ಲಿ ಉಚಿತವಾಗಿ ನ್ಯಾಪ್’ಕಿನ್ ವಿತರಿಸುವ ಯಂತ್ರ ಅಳವಡಿಸಲಾಗುವುದು. ಶೀಘ್ರವೇ ಇದನ್ನು ಬೆಂಗಳೂರು ಸೇರಿದಂತೆ ಇತರೆ ನಗರಗಳಲ್ಲಿ ನಮ್ಮ ಥಿಯೇಟರ್‌ಗಳಿಗೂ ವಿಸ್ತರಿಸಲಾಗುವುದು ಎಂದು ಸಂಸ್ಥೆ ಹೇಳಿದೆ. ತಮಿಳುನಾಡಿನ ಅರುಣಾಚಲಂ ಮುರುಗನಾಥನ್ ಅವರ ಜೀವನ ಕಥೆಯನ್ನು ಆಧರಿಸಿ ಪ್ಯಾಡ್‌ಮ್ಯಾನ್ ಚಿತ್ರ ನಿರ್ಮಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.