ಅಟಲ್‌ ಸಂತಾಪ ವೇಳೆ ಬಿದ್ದೂ ಬಿದ್ದು ನಕ್ಕ ಬಿಜೆಪಿ ಸಚಿವರು!

Published : Aug 25, 2018, 11:56 AM ISTUpdated : Sep 09, 2018, 08:45 PM IST
ಅಟಲ್‌ ಸಂತಾಪ ವೇಳೆ ಬಿದ್ದೂ ಬಿದ್ದು ನಕ್ಕ ಬಿಜೆಪಿ ಸಚಿವರು!

ಸಾರಾಂಶ

ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ನಿಧನದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಸಂತಾಪ ಸೂಚಕ ಸಭೆಯಲ್ಲಿ ಇಬ್ಬರು ಸಚಿವರು ನಗುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಈ ದೃಶ್ಯವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ರಾಯ್ಪುರ: ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ನಿಧನದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಸಂತಾಪ ಸೂಚಕ ಸಭೆಯಲ್ಲಿ ಛತ್ತೀಸ್‌ಗಢದ ಇಬ್ಬರು ಸಚಿವರು ನಗುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಈ ದೃಶ್ಯವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಬಿಜೆಪಿ ಸರ್ಕಾರದ ಮುಜುಗರಕ್ಕೆ ಕಾರಣವಾಗಿದೆ.

ವಾಜಪೇಯಿ ಅವರ ಅಸ್ಥಿಯನ್ನು ನದಿಗೆ ಬಿಡುವ ಸಲುವಾಗಿ ಬುಧವಾರದಂದು ಸಂತಾಪ ಸೂಚಕ ಸಭೆಯನ್ನು ಆಯೋಜಿಸಲಾಗಿತ್ತು. ಈ ವೇಳೆ, ಕೃಷಿ ಸಿಚಿವ ಬ್ರಿಜ್‌ಮೋಹನ್‌ ಅಗರ್ವಾಲ್‌ ಮತ್ತು ಆರೋಗ್ಯ ಸಚಿವ ಅಜಯ್‌ ಚಂದ್ರಕರ್‌ ಅವರು ವೇದಿಕೆಯ ಮೇಲೆ ಹಾಸ್ಯ ಚಟಾಕಿ ಹಾರಿಸುತ್ತಾ ಕೈ ತಟ್ಟಿ, ಬಿದ್ದೂಬಿದ್ದು ನಗುತ್ತಿರುವುದು ಕಂಡು ಬಂದಿದೆ. 

ಇದನ್ನು ಗಮನಿಸಿದ ಬಿಜೆಪಿ ಮುಖ್ಯಸ್ಥ ಧರ್ಮಲಾಲ್‌ ಕೌಶಿಕ್‌ ಚಂದ್ರ ಶೇಖರ್‌ ಅವರ ಕೈ ಹಿಡಿದು ನಗದಂತೆ ಎಚ್ಚರಿಸಿದ್ದಾರೆ. ಈ ಸಭೆಯಲ್ಲಿ ಮುಖ್ಯಮಂತ್ರಿ ರಮಣ್‌ ಸಿಂಗ್‌ ಅವರು ಕೂಡ ಭಾಗಿಯಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

8ನೇ ಕ್ಲಾಸ್ ಹುಡುಗಿ ಮೇಲೆ ಬಲತ್ಕಾರ, ಬೆದರಿಸಿ ಚಿನ್ನ ದೋಚಿದ್ದ 10ನೇ ಕ್ಲಾಸ್ ಹುಡುಗ ಅರೆಸ್ಟ್
ಬಿಜೆಪಿ ನಾಯಕನ ಸಂಬಂಧಿ 17ರ ಯುವಕನಿಗೆ ಚೂರಿ ಇರಿದು ಕೊಂದ ದುಷ್ಕರ್ಮಿಗಳು!