
ನವದೆಹಲಿ[ಮಾ.03]: ಕಾಂಗ್ರೆಸ್ ನ ಹಿರಿಯ ನಾಯಕ ಪಿ. ಚಿದಂಬರಂ ಬಹುತೇಕ ಮೋದಿ ಸರ್ಕಾರವ್ನನು ಟೀಕಿಸುವುದನ್ನು ಕಂಡಿದ್ದೇವೆ. ಆದರೀಗ ಬಾರಿ ಪರಿಸ್ಥಿತಿ ಕೊಂಚ ಬದಲಾಗಿದೆ. ವಾಸ್ತವವಾಗಿ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಬಿಜೆಪಿ ನೇತೃತ್ವದ ಸರ್ಕಾರ ಹಮ್ಮಿಕೊಂಡಿರುವ ಗಂಗಾ ಸ್ವಚ್ಛತಾ ಅಭಿಯಾನ, ಹೆದ್ದಾರಿಗಳ ನಿರ್ಮಾಣ ಹಾಗೂ ಆಧಾರ್ ಗೆ ಸಂಬಂಧಿಸಿದಂತೆ ತೆಗೆದುಕೊಂಡ ನಿರ್ಧಾರಗಳನ್ನು ಪ್ರಶಂಸಿಸಿದ್ದಾರೆ.
ಮೋದಿ ನೇತೃತ್ವದ ಸರ್ಕಾರವನ್ನು ಪ್ರಶಂಸಿಸಿರುವ ಕಾಂಗ್ರೆಸ್ ನಾಯಕ ಚಿದಂಬರಂ ಧೃಡ ನಿರ್ಧಾರ ಹಾಗೂ ಪರಿಶ್ರಮದಿಂದ ಗಂಗಾ ನದಿ ಶುದ್ಧಗೊಂಡಿದೆ. ಈ ವಿಚಾರವಾಗಿ ನಾನು ಹೆಮ್ಮೆಪಟ್ಟುಕೊಳ್ಳುತ್ತೇನೆ. ಈಗಾಗಲೇ ಇವರು ಕೈಗೆತ್ತಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾರ್ಯಕ್ರಮವೂ ಯಶಸ್ಸು ಕಂಡಿದೆ. ಇಷ್ಟೇ ಅಲ್ಲದೆ ಆಧಾರ್ ಜಾರಿಗೊಳಿಸಿ ಇದನ್ನು ಮತ್ತಷ್ಟು ಬಲಪಡಿಸಿದೆ ಎಂದಿದ್ದಾರೆ.
ಈ ಹಿಂದೆ ಕೇಂದ್ರದ ಬಿಜೆಪಿ ಸರ್ಕಾರವನ್ನು ಟೀಕಿಸುತ್ತಿದ್ದ ಚಿದಂಬರಂ ಇಂತಹ ಹೇಳಿಕೆ ನೀಡಿರುವುದು ಅಚ್ಚರಿಗೀಡು ಮಾಡಿದೆ. ಅಲ್ಲದೇ, ಕಳೆದ ಎರಡು ವಾರಗಳ ಹಿಂದಷ್ಟೇ ನಡೆದಿದ್ದ ಪುಲ್ವಾಮಾ ದಾಳಿ ಸಂದರ್ಭದಲ್ಲೂ 'ಗುಪ್ತಚರ ಇಲಾಖೆಯ ವೈಫಲ್ಯ ಎಂಬ ಆರೋಪಕ್ಕೆ ಸರ್ಕಾರವೇ ಉತ್ತರಿಸಬೇಕು' ಎಂದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.