ಕಳಸಕ್ಕೆ ಬರಲಿದ್ದಾರೆ ಸನ್ನಿ ಲಿಯೋನ್, ದೀಪಿಕಾ ಪಡುಕೋಣೆ!

Jul 22, 2018, 12:23 PM IST

ಮೂಡಿಗೆರೆ ತಾಲೂಕಿನ ಕಳಸಾ ಪಟ್ಟಣದಲ್ಲಿ ಜನರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರಸ್ತೆ ಮಾಡಿದ ಮೂರೇ ತಿಂಗಳಿಗೆ ಗುಂಡಿ ಬಿದ್ದಿದೆ. ಗುಂಡಿ ಬಿದ್ದ ರಸ್ತೆಯಲ್ಲಿ ಸನ್ನಿ ಲಿಯೋನ್, ದೀಪಿಕಾ ಪಡುಕೋಣೆ ಫೋಟೋ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೀಪಿಕಾ ಪಡುಕೋಣೆ ಹಾಗೂ ಸನ್ನಿ ಲಿಯೋನ್ ಸ್ವಿಮ್ಮಿಂಗ್ ಪೂಲ್ ಉದ್ಘಾಟನೆ ಮಾಡಲಿದ್ದಾರೆ ಎಂದು ಬರೆದಿದ್ದಾರೆ.