
ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಸಸ್ಪೆಂಡ್ ಆಗಿದ್ದ ಮುಖ್ಯ ಎಂಜಿನಿಯರ್ ಎನ್.ಟಿ. ಚಿಕ್ಕರಾಯಪ್ಪ ಅವರ ಅಮಾ ನತು ಆದೇಶವನ್ನು ಸರ್ಕಾರ ವಾಪಸ್ ಪಡೆದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮತ್ತು ಅಮಾನತುಗೊಂಡು ಆರು ತಿಂಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಸ್ಪೆಂಡ್ ಆದೇಶ ವಾಪಸ್ ಪಡೆಯಲಾಗಿದೆ ಎಂದು ಗೊತ್ತಾಗಿದೆ. ಆದಾಯ ತೆರಿಗೆ ಅಧಿಕಾರಿ ಗಳು ದಾಳಿ ನಡೆಸಿದ ಹಿನ್ನೆಲೆಯಲ್ಲಿ 2016ರ ಡಿಸೆಂಬರ್ 2ರಂದು ಸಿಬಿಐ ಹಾಗೂ ಜಾರಿ ನಿರ್ದೇಶನಾಲಯಗಳು ಚಿಕ್ಕರಾಯಪ್ಪ ಹಾಗೂ ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಎಂಜಿನಿಯರ್ ಎಸ್.ಸಿ.ಜಯಚಂದ್ರ ಅವರನ್ನು ವಿಚಾರಣೆಗೆ ಒಳಪಡಿಸಿದ್ದವು.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಬ್ಬರೂ ಅಧಿಕಾರಿಗಳು ಅಮಾನತು ಗೊಳಿಸಿತ್ತು. ಆದರೆ ನಂತರದ ದಿನಗಳಲ್ಲಿ ಚಿಕ್ಕರಾಯಪ್ಪ ವಿರುದ್ಧದ ಪ್ರಕರಣವನ್ನು ಸಿಬಿಐ ಕೈಬಿಟ್ಟಿತ್ತಲ್ಲದೇ ಎಫ್‌ಐಆರ್‌ನಿಂದ ಹೆಸರನ್ನೂ ತೆಗೆದು ಹಾಕಿತ್ತು. ಈ ಮಧ್ಯೆ 2017ರ ಜನವರಿಯಲ್ಲಿ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿತ್ತು. ನಂತರ ರಾಜ್ಯ ಸರ್ಕಾರ ಹೊರಡಿಸಿದ್ದ ಅಮಾನತು ಆದೇಶ ವಾಪಸ್ ಪಡೆಯುವಂತೆ ಕೂಡ ಸೂಚಿಸಿತ್ತು. ಕೋರ್ಟ್ ಆದೇಶ ಆಧರಿಸಿ ಚಿಕ್ಕರಾಯಪ್ಪ ಸರ್ಕಾರಕ್ಕೆ ಅಮಾನತು ವಾಪಸ್ ಪಡೆಯುವಂತೆ ಪತ್ರ ಬರೆದಿದ್ದರು.
ಇದೇ ವೇಳೆ, ಕೆಸಿಎಸ್‌ಆರ್ ನಿಯಮದ ಅನ್ವಯ ಅಮಾನತುಗೊಂಡು ಜೂನ್ 2ಕ್ಕೆ ಆರು ತಿಂಗಳು ಪೂರ್ಣಗೊಳ್ಳುತ್ತಿರುವ ಕಾರಣಕ್ಕಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಮಾನತು ವಾಪಸ್ ಪಡೆಯಲು ನಿರ್ಧರಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.