ಬೆಂಗಳೂರಿನಲ್ಲಿ ಮಕ್ಕಳ ಕಳ್ಳರು! ಕಿಡ್ನಾಪ್ ಆದ ಮಕ್ಕಳನ್ನು ಇವರು ಏನು ಮಾಡುತ್ತಿದ್ದರು ಗೊತ್ತಾ?

Published : Oct 13, 2017, 08:23 AM ISTUpdated : Apr 11, 2018, 12:50 PM IST
ಬೆಂಗಳೂರಿನಲ್ಲಿ ಮಕ್ಕಳ ಕಳ್ಳರು! ಕಿಡ್ನಾಪ್ ಆದ ಮಕ್ಕಳನ್ನು ಇವರು ಏನು ಮಾಡುತ್ತಿದ್ದರು ಗೊತ್ತಾ?

ಸಾರಾಂಶ

ಬೆಂಗಳೂರಿನಲ್ಲಿ ಪುಟ್ಟ ಮಕ್ಕಳನ್ನು ಕಳವು ಮಾಡಿ ಸೌದಿ ರಾಷ್ಟ್ರಗಳಿಗೆ ಮಾರಟ ಮಾಡುತಿದ್ದ ಜಾಲವೊಂದು ಪೊಲೀಸರ ಬಲೆಗೆ ಬಿದ್ದಿದೆ. ನಗರದಲ್ಲಿ ಇದೇ ತಿಂಗಳ 5ನೇ ತಾರಿಖಿನಂದು ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್​ ಆಗಿದ್ದ ಮಗುವನ್ನು ರಕ್ಷಿಸುವುದರ ಜೊತೆಗೆ ಪ್ರಕರಣ ಭೇದಿಸಿರುವ ಪೊಲೀಸರು, ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಶಿವಾಜಿನಗರದಲ್ಲಿ ಬಂಧಿಸಿದ್ದಾರೆ.

ಬೆಂಗಳೂರು(ಅ.13): ಬೆಂಗಳೂರಿನಲ್ಲಿ ಪುಟ್ಟ ಮಕ್ಕಳನ್ನು ಕಳವು ಮಾಡಿ ಸೌದಿ ರಾಷ್ಟ್ರಗಳಿಗೆ ಮಾರಟ ಮಾಡುತಿದ್ದ ಜಾಲವೊಂದು ಪೊಲೀಸರ ಬಲೆಗೆ ಬಿದ್ದಿದೆ. ನಗರದಲ್ಲಿ ಇದೇ ತಿಂಗಳ 5ನೇ ತಾರಿಖಿನಂದು ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್​ ಆಗಿದ್ದ ಮಗುವನ್ನು ರಕ್ಷಿಸುವುದರ ಜೊತೆಗೆ ಪ್ರಕರಣ ಭೇದಿಸಿರುವ ಪೊಲೀಸರು, ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಶಿವಾಜಿನಗರದಲ್ಲಿ ಬಂಧಿಸಿದ್ದಾರೆ.

ಇನ್ನು ಕಳೆದ ಎಂಟು ದಿನಗಳ ಹಿಂದೆ ಕಿಡ್ನಾಪ್​ ಆಗಿದ್ದ ಮಗುವಿನ ಪತ್ತೆಗಾಗಿ ಮೂರು ವಿಶೇಷ ತಂಡಗಳ ರಚನೆ ಮಾಡಲಾಗಿತ್ತು. ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡ ಪೊಲಿಸರಿಗೆ ಸಿಕ್ಕ ಸಿಸಿಟಿವಿ ಆಧರಿಸಿ ಆರೋಪಿಗಳ ಪತ್ತೆ ಮಾಡಿದ ಪೊಲೀಸರಿಗೆ ಆಘಾತಕಾರಿ ಸಂಗತಿ ತಿಳಿದು ಬಂದಿದ್ದು, ಮಕ್ಕಳನ್ನು ಕಿಡ್ನಾಪ್​ ಮಾಡುವ ಜಾಲದಲ್ಲಿ ಸಕ್ರಿಯವಾಗಿದ್ದ ಈ ಮಂದಿ ಕಂಡವರ ಮಕ್ಕಳನ್ನು ಕದ್ದು ಲಕ್ಷಾಂತರ ರೂಪಾಯಿಗೆ ಮಾರಾಟ ಮಾಡುತಿದ್ದರು ಎಂಬ ಕರಾಳ ಸಂಗತಿ ಹೊರಬಂದಿದೆ.

ಸದ್ಯ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಗ್ಯಾಂಗ್​ ಹಿಂದಿನ ದೊಡ್ಡ ಜಾಲವನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜಕೀಯ ಪಕ್ಷಗಳಿಗೆ ₹3811 ಕೋಟಿ ಫಂಡ್‌: ಬಿಜೆಪಿಗೇ 82%!
ಕಾಂಗ್ರೆಸ್‌ನಿಂದ ದೇಶ ವಿರೋಧಿ ಚಟುವಟಿಕೆ : ಮೋದಿ ಮತ್ತೆ ತರಾಟೆ