
ಸಿಂಗಾಪೂರ್(ಜೂ.02): ಅಮೆರಿಕ-ಚೀನಾ ನಡುವೆ ಯುದ್ಧ ಸಂಭವಿಸಿದರೆ ಅದರಿಂದ ವಿಶ್ವದ ಸರ್ವನಾಶ ಖಚಿತ ಎಂದು ಚೀನಾದ ರಕ್ಷಣಾ ಸಚಿವ ವೆಯಿ ಫೆಂಗೆ ಅಭಿಪ್ರಾಯಪಟ್ಟಿದ್ದಾರೆ.
ಸಿಂಗಾಪೂರದಲ್ಲಿ ಶಾಂಗ್ರಿ-ಲಾ ಶೃಂಗಸಭೆ ಉದ್ದೇಶಿಸಿ ಮಾತನಾಡಿದ ವೆಯಿ ಫೆಂಗೆ, ತೈವಾನ್ ಆಡಳಿತದಲ್ಲಿ ಅಮೆರಿಕದ ಹಸ್ತಕ್ಷೇಪ ಉಭಯ ದೇಶಗಳ ನಡುವೆ ಬಿಗುವಿನ ವಾತಾವರಣ ಸೃಷ್ಟಿಸಬಲ್ಲದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ತೈವಾನ್ ಮೇಲಿನ ತನ್ನ ಅಧಿಪತ್ಯವನ್ನು ಉಳಿಸಿಕೊಳ್ಳಲು ಚೀನಾ ಕೊನೆಯವರೆಗೂ ಹೋರಾಡಲಿದೆ ಎಂದ ವೆಯಿ ಫೆಂಗೆ, ಅಮೆರಿಕದ ಅನಗತ್ಯ ಹಸ್ತಕ್ಷೇಪವನ್ನು ಹಿಮ್ಮೆಟ್ಟಿಸಲಾಗುವುದು ಎಂದು ಹೇಳಿದ್ದಾರೆ.
ಇದೇ ವೇಳೆ ಅಮೆರಿಕ-ಚೀನಾ ನಡುವಿನ ವಾಣಿಜ್ಯ ಸಮರದ ಕುರಿತು ಮಾತನಾಡಿರುವ ವೆಯಿ ಫೆಂಗೆ, ಚೀನಾ ಮಾತುಕತೆಗೆ ಸದಾ ಸಿದ್ಧವಿದ್ದು, ಈ ವಾಣಿಜ್ಯ ಸಮರದಿಂದ ವಿಶ್ವಕ್ಕೆ ಅಪಾರ ನಷ್ಟವಾಗುತ್ತಿದೆ ಎಂದು ಖೇದ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.