ಮತ್ತೆ ಡೋಕ್ಲಾಂನಲ್ಲಿ ಚೀನಾ ಕ್ಯಾತೆ: ಭಾರೀ ಸೇನೆ ನಿಯೋಜನೆ

Published : Dec 12, 2017, 12:41 PM ISTUpdated : Apr 11, 2018, 01:09 PM IST
ಮತ್ತೆ ಡೋಕ್ಲಾಂನಲ್ಲಿ ಚೀನಾ ಕ್ಯಾತೆ: ಭಾರೀ ಸೇನೆ ನಿಯೋಜನೆ

ಸಾರಾಂಶ

ಭಾರತ ಮತ್ತು ಚೀನಾ ನಡುವೆ 73 ದಿನಗಳ ಕಾಲ ಶೀತಲ ಸಮರಕ್ಕೆ ಕಾರಣವಾಗಿದ್ದ ವಿವಾದಿತ ಡೋಕ್ಲಾಂ ಪ್ರದೇಶದಲ್ಲಿ ಚೀನಾ ಮತ್ತೆ ದೊಡ್ಡ ಪ್ರಮಾಣದಲ್ಲಿ ತನ್ನ ಸೇನೆ ನಿಯೋಜಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ನವದೆಹಲಿ: ಭಾರತ ಮತ್ತು ಚೀನಾ ನಡುವೆ 73 ದಿನಗಳ ಕಾಲ ಶೀತಲ ಸಮರಕ್ಕೆ ಕಾರಣವಾಗಿದ್ದ ವಿವಾದಿತ ಡೋಕ್ಲಾಂ ಪ್ರದೇಶದಲ್ಲಿ ಚೀನಾ ಮತ್ತೆ ದೊಡ್ಡ ಪ್ರಮಾಣದಲ್ಲಿ ತನ್ನ ಸೇನೆ ನಿಯೋಜಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸಿಕ್ಕಿಂ-ಭೂತಾನ್ ಮತ್ತು ಟಿಬೆಟ್‌ಗಳ ಗಡಿಯಲ್ಲಿರುವ ಡೋಕ್ಲಾಂ ಪ್ರದೇಶದಲ್ಲಿ ಚೀನಾ ಸೋಮವಾರ ಸುಮಾರು 1600-1800 ಸೈನಿಕರನ್ನು ಶಾಶ್ವತವಾಗಿ ನಿಯೋಜಿಸಿದೆ.

ಅಲ್ಲದೆ, ಎರಡು ಹೆಲಿಪಾಡ್, ರಸ್ತೆಗಳ ಅಭಿವೃದ್ಧಿ ಇತರ ಸೌಲಭ್ಯಗಳನ್ನು ನಿರ್ಮಿಸುತ್ತಿದೆ. ಕಳೆದ ಕೆಲವು ದಿನಗಳ ಹಿಂದೆ ಡೋಕ್ಲಾಂ ಪ್ರದೇಶದಲ್ಲಿ ರಸ್ತೆ ಅಭಿವೃದ್ಧಿಪಡಿಸುವ ಚೀನಾದ ಯತ್ನವನ್ನು ಭಾರತ ಯಶಸ್ವಿಯಾಗಿ, ತಡೆದಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ
ವರುಣಾ ಜನತೆಯ ಋಣ ತೀರಿಸಲು ಸಾಧ್ಯವಿಲ್ಲ, ಆದರೂ ಶ್ರಮಿಸುವೆ: ಯತೀಂದ್ರ ಸಿದ್ದರಾಮಯ್ಯ