ಅಮೆರಿಕಾಗೆ ಖಡಕ್ ಎಚ್ಚರಿಕೆ ನೀಡಿದ ಚೀನಾ

By Web DeskFirst Published Sep 27, 2018, 4:16 PM IST
Highlights

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನವಂಬರ್ 6 ರಂದು ನಡೆಯುವ  ದೇಶೀಯ ಚುನಾವಣೆಗಳಲ್ಲಿ ಚೀನಾ ಹಸ್ತಕ್ಷೇಪ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದೆ. 

ಬೀಜಿಂಗ್[ಸೆ.27]: ತಾವು ಬೇರೆ ದೇಶಗಳ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ, ಅದೇ ರೀತಿ ತಮ್ಮ ಮೇಲೆ ಹಸ್ತಕ್ಷೇಪ ನಡೆಸುವುದನ್ನು ಸಹಿಸುವುದಿಲ್ಲ ಎಂದು ಚೀನಾದ ವಿದೇಶಾಂಗ ಇಲಾಖೆ ಅಮೆರಿಕಾಕ್ಕೆ ಖಡಕ್ ಎಚ್ಚರಿಕೆ ನೀಡಿದೆ.

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನವಂಬರ್ 6 ರಂದು ನಡೆಯುವ  ದೇಶೀಯ ಚುನಾವಣೆಗಳಲ್ಲಿ ಚೀನಾ ಹಸ್ತಕ್ಷೇಪ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದೆ. 

ನಮ್ಮ ದೇಶ ಯಾವ ದೇಶದ ವಿಚಾರಗಳಲ್ಲೂ ತಲೆ ಹಾಕುವುದಿಲ್ಲ. ಈ ಬಗ್ಗೆ ನಾವು ಸ್ಪಷ್ಟವಾಗಿ ಹೇಳುತ್ತಿದ್ದೇವೆ.  ಅಮೆರಿಕಾವು ಸಂಬಂಧ ಕೆಡಿಸುವ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕು' ಎಂದು ವಿದೇಶಾಂಗ ಇಲಾಖೆ ವಕ್ತಾರರಾದ ಗೆಂಗ್ ಶುಹಾಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವಂಬರ್ 6 ರಂದು ಅಮೆರಿಕಾದಲ್ಲಿ ಮಧ್ಯಾಮವಧಿ ಚುನಾವಣೆ ನಡೆಯಲಿದ್ದು, ಟ್ರಂಪ್ ಪಕ್ಷವೂ ಎಲ್ಲ 435 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.

click me!