
ಬೀಜಿಂಗ್ : ಅಪಾಯಕಾರಿ ಅಂಶಗಳನ್ನು ಒಳಗೊಂಡಂತಹ 4 ಸಾವಿರಕ್ಕೂ ಅಧಿಕ ವೆಬ್ ಸೈಟ್ ಗಳಿಗೆ ಚೀನಾ ಸರ್ಕಾರ ನಿಷೇಧ ಹೇರಿದೆ. ಕಳೆದ ಮೂರು ತಿಂಗಳ ಅವಧಿಯಲ್ಲಿ ಸೈಟ್ ಗಳನ್ನು ಬ್ಯಾನ್ ಮಾಡಲಾಗಿದೆ.
ಈ ಬಗ್ಗೆ ಚೀನಾ ಕ್ಸಿನ್ ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದ್ದು, ಅಕ್ರಮವಾಗಿ ನಡೆಸುವ ಎಲ್ಲಾ ವೆಬ್ ಸೈಟ್ ಗಳಿಗೆ ಬೀಗ ಬಿದ್ದಿದೆ ಎಂದು ಹೇಳಿದೆ.
ಚೀನಾ ಸರ್ಕಾರ ಅಕ್ರಮ ಆನ್ ಲೈನ್ ಚಟುವಟಿಕೆಗಳಿಗೆ ಬ್ರೇಕ್ ಹಾಕುವ ಸಲುವಾಗಿ ಈ ಕ್ರಮ ಕೈಗೊಂಡಿದೆ. ಇದರಲ್ಲಿ ಪ್ರಮುಖವಾಗಿ ಪೋರ್ನೋಗ್ರಫಿ, ಕಳ್ಳತನ, ಧಾರ್ಮಿಕ ವಿಚಾರಗಳು ಹಾಗೂ ಸುಳ್ಳು ಸುದ್ದಿಗಳನ್ನು ಹರಡುವ ವೆಬ್ ಸೈಟ್ ಗಳು ಬ್ಯಾನ್ ಆಗಿವೆ.
ಕಳೆದ ಮೇ ತಿಂಗಳಿನಿಂದ ಈ ಅಭಿಯಾನವನ್ನು ಆರಂಭ ಮಾಡಲಾಗಿದ್ದು, ಆನ್ ಲೈನ್ ನಲ್ಲಿ ಅತ್ಯಂತ ಅಪಾಯಕಾರಿಯಾದ ಒಟ್ಟು 147000 ಮಾಹಿತಿಗಳನ್ನು ತೆಗೆದು ಹಾಕಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.