
ಬೀಜಿಂಗ್(ಜು.29): ಬ್ರಿಕ್ಸ್ ರಾಷ್ಟ್ರಗಳ ರಾಷ್ಟ್ರಿಯ ಭದ್ರತಾ ಸಲಹೆಗಾರರ ಸಭೆ ಚೀನಾದಲ್ಲಿ ನಡೆಯಿತು. ಸಭೆಗೆ ಭಾರತದ ಪ್ರತಿನಿಧಿಯಾಗಿ ಎನ್ಎಸ್ಎ ಅಜಿತ್ ದೋವಲ್ ಭಾಗವಹಿಸಿದ್ರು. ಸಭೆಯಲ್ಲಿ ಅಜಿತ್ ದೋವಲ್ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ವಿವಿಧ ದೇಶಗಳ ಗಡಿ ವಿವಾದ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ವ್ಯಾಪಾಕ ಭೌಗೋಳಿಕ ಅಂತರದ ನಡುವೆಯೂ ಸದಸ್ಯ ರಾಷ್ಟ್ರಗಳ ನಡುವೆ ಪರಸ್ಪರ ವಿಶ್ವಾಸ ಹಾಗೂ ಸಹಕಾರ ಮುಂದುವರಿದಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ರು. ಆದ್ರೆ ಎಲ್ಲಿಯೂ ಭಾರತದ ಜೊತೆಗಿನ ಗಡಿ ವಿವಾದದ ಬಗ್ಗೆ ಪ್ರಸ್ತಾಪಿಸದೆ ಚೀನಾ ಎಚ್ಚರಿಕೆ ನಡೆ ಅನುಸರಿಸಿತು.
ಇನ್ನು ಇದೇ ವೇಳೆ ಮಾತನಾಡಿದ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಭಯೋತ್ಪಾದನೆ ನಿಗ್ರಹ ಸೇರಿದಂತೆ ಪ್ರಾದೇಶಿಕ ಮತ್ತು ಗಡಿ ವಿಷಯಗಳ ಕುರಿತು ಬ್ರಿಕ್ಸ್ ದೇಶಗಳು ನಾಯಕತ್ವ ವಹಿಸಿಕೊಳ್ಳಬೇಕೆಂದು ಆಗ್ರಹಿಸಿದ್ರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.