ಬಾಂಬ್ ವಾರ್ ಆಗಿ ಬದಲಾದ ಕೋಲ್ಡ್ ವಾರ್!

Published : Jul 26, 2018, 02:45 PM ISTUpdated : Jul 26, 2018, 06:24 PM IST

ಸಾರಾಂಶ

ಅಮೆರಿಕ ರಾಯಭಾರಿ ಕಚೇರಿ ಬಳಿ ಬಾಂಬ್ ಸ್ಫೋಟ ಬಾಂಬ್ ವಾರ್ ಆಗಿ ಬದಲಾದ ಕೋಲ್ಡ್ ವಾರ್ ವೀಸಾ ಸಂದರ್ಶನದ ವೇಳೆ ಪ್ರಬಲ ಬಾಂಬ್ ಸ್ಫೋಟ ಪಕ್ಕದಲ್ಲೇ ಇರುವ ಭಾರತೀಯ ರಾಯಭಾರ ಕಚೇರಿ ಭಾರತೀಯ ಅಧಿಕಾರಿಗಳು ಸುರಕ್ಷಿತವಾಗಿದ್ದಾರೆ   

ಬಿಜಿಂಗ್(ಜು.26): ಚೀನಾ ರಾಜಧಾನಿ ಬೀಜಿಂಗ್ ನಲ್ಲಿರುವ ಅಮೆರಿಕಾ ರಾಯಭಾರಿ ಕಚೇರಿ ಸಮೀಪ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದೆ. ಇಂದು ಬೆಳಿಗ್ಗೆ 11 ಗಂಟೆ ವೇಳೆಗೆ ಅಮೆರಿಕ ರಾಯಭಾರಿ ಕಚೇರಿ ಬಳಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ. 

ಅಮೆರಿಕ ರಾಯಭಾರಿ ಕಚೇರಿ ಸಮೀಪವೇ ಭಾರತೀಯ ರಾಯಭಾರಿ ಕಚೇರಿ ಕೂಡ ಇದ್ದು, ಎಲ್ಲರೂ ಕ್ಷೇಮವಾಗಿದ್ದಾರೆಂದು ಭಾರತೀಯ ಅಧಿಕಾರಿಗಳು ಅಧಿಕಾರಿಗಳು ತಿಳಿಸಿದ್ದಾರೆ. ಬಾಂಬ್ ಸ್ಫೋಟ ಸಂಭವಿಸಿದ ಸ್ಥಳದ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸ್ಥಳದ ಸುತ್ತಲೂ ದಟ್ಟ ಕಪ್ಪು ಹೊಗೆ ಆವರಿಸಿರುವುದು ಕಂಡು ಬಂದಿದೆ.

ವೀಸಾ ಸಂದರ್ಶನಕ್ಕಾಗಿ ಅಮೆರಿಕ ರಾಯಭಾರಿ ಕಚೇರಿಯ ಹೊರಗೆ ಜನ ಸಾಲಿನಲ್ಲಿ ನಿಂತಿದ್ದರು. ಈ ವೇಳೆ ಸ್ಫೋಟ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಲು ಅಮೆರಿಕ ರಾಯಭಾರಿ ಕಚೇರಿ ನಿರಾಕರಿಸಿದೆ. ಸ್ಫೋಟ ಸಂಭವಿಸಿದ ಸ್ಥಳ ಬೀಜಿಂಗ್ ಹೊರವಲಯದಲ್ಲಿದ್ದು, ಇಲ್ಲಿ ಭಾರತ ಸೇರಿ ಅನೇಕ ರಾಷ್ಟ್ರಗಳ ರಾಯಭಾರಿ ಕಚೇರಿಗಳೂ ಕೂಡ ಇವೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌