
ಲಂಡನ್(ಆ.24): ವಿದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೇಲೆ ತಮ್ಮ ವಾಗ್ದಾಳಿಯನ್ನು ಮುಂದುವರೆಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಉಗ್ರವಾದ, ಅಪನಗದೀಕರಣ, ಜಿಎಸ್ ಟಿ, ಸಾಮೂಹಿಕ ಹತ್ಯೆಗಳ ಬಳಿಕ ಇದೀಗ ಡೋಕ್ಲಾಮ್ ವಿವಾದವನ್ನು ಕೆದಕಿದ್ದಾರೆ.
ಲಂಡನ್ ಇಂಟರ್‌ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸ್ ನಲ್ಲಿ ಭಾಷಣ ಮಾಡಿದ ರಾಹುಲ್, ಡೋಕ್ಲಾಮ್ ನಲ್ಲಿ ಚೀನಿ ಸೈನಿಕರು ಇನ್ನೂ ಬೀಡು ಬಿಟ್ಟಿದ್ದು, ಇದು ಪ್ರಧಾನಿ ಮೋದಿ ಸರ್ಕಾರದ ವಿಫಲ ವಿದೇಶಾಂಗ ನೀತಿಯ ಫಲ ಎಂದು ಆರೋಪಿಸಿದ್ದಾರೆ.
ಕೇಂದ್ರ ಸರ್ಕಾರದ ಅಧಿಕಾರ ವಿಕೇಂದ್ರೀಕರಣ, ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಹೇಳಿಕೆ ನೀಡಿರುವ ರಾಹುಲ್, ಸರ್ಕಾರಿ ಸ್ವಾಯತ್ತ ಸಂಸ್ಥೆಗಳಲ್ಲಿ ಆರ್‌ಎಸ್‌ಎಸ್ ಹಸ್ತಕ್ಷೇಪ ಮಾಡುತ್ತಿದೆ ಎಂದು ಗಂಭೀರ ಆರೋಪ ಕೂಡ ಮಾಡಿದ್ದಾರೆ. ಡೋಕ್ಲಾಮ್ ವಿವಾದ ಕುರಿತು ತಮಗೆ ಪೂರ್ಣ ಅರಿವಿರದಿದ್ದರೂ, ಅಲ್ಲಿ ಇನ್ನೂ ಚೀನಿ ಪಡೆಗಳು ಇರುವುದು ಸತ್ಯ ಎಂದು ರಾಹುಲ್ ಹೇಳಿದ್ದಾರೆ.
ಚೀನಾ ಜೊತೆ ಭಾರತ ಸಮತೋಲಿತ ಸಂಬಂಧ ಸಾಧಿಸಬೇಕಿದ್ದು, ಚೀನಾ ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ರಾಷ್ಟ್ರ ಎಂಬುದನ್ನು ನಾವು ಮರೆಯಬಾರದು ಎಂದು ರಾಹುಲ್ ಸಂವಾದದಲ್ಲಿ ಹೇಳಿದ್ದಾರೆ. ಇದೇ ವೇಳೆ ಪಾಕಿಸ್ತಾನ ವಿಷಯ ಪ್ರಸ್ತಾಪಿಸಿರುವ ರಾಹುಲ್, ಪಾಕಿಸ್ತಾನದಲ್ಲಿ ಸ್ಥಿರ ಸರ್ಕಾರ ರಚನೆಯಾಗುವವರೆಗೂ ಶಾಂತಿ ಮಾತುಕತೆಗಾಗಿ ನಾವು ಕಾಯಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.