
ಭೋಪಾಲ್(ಆ.21): ಮಧ್ಯಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೆ ವರ್ಷ ಬಾಕಿ ಇರುವಂತೆಯೇ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ವಿದ್ಯಾರ್ಥಿಗಳಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.
12ನೇ ತರಗತಿಯಲ್ಲಿ ಶೇ.75ಕ್ಕಿಂತ ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಭರವಸೆ ನೀಡಿದ್ದಾರೆ. ಬಹುಕೋಟಿ ವ್ಯಾಪಂ ಹಗರಣದಲ್ಲಿ ಹರಾಜಾದ ರಾಜ್ಯದ ಶಿಕ್ಷಣ ಇಲಾಖೆಯ ಗೌರವ, ಪ್ರತಿಷ್ಠೆಯನ್ನು ಮರಳಿ ತರಲು ಪಣತೊಟ್ಟಿರುವ ಸಿಎಂ ಚೌಹಾಣ್, ಸಿಬಿಎಸ್ಸಿ ಪಠ್ಯಕ್ರಮದಲ್ಲಿ ಶೇ. 85ಕ್ಕಿಂತ ಹೆಚ್ಚು ಅಂಕಗಳಿಗೆ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಶುಲ್ಕವನ್ನೂ ಭರಿಸುವ ಭರವಸೆ ನೀಡಿದ್ದಾರೆ.
ಆರ್ಥಿಕ ತೊಂದರೆಯಿಂದಾಗಿಯೇ ರಾಜ್ಯದಲ್ಲಿ ಹಲವರು 12ನೇ ತರಗತಿ ಬಳಿಕ ಶಿಕ್ಷಣ ತೊರೆಯುತ್ತಿದ್ದಾರೆ. ಇದನ್ನು ತಪ್ಪಿಸಲು ಈ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ರು. ಅಲ್ದೇ ಅರಣ್ಯ ಇಲಾಖೆ ಹೊರತು ಪಡಿಸಿ ಸರ್ಕಾರದ ಉಳಿದೆಲ್ಲ ವಿಭಾಗಗಳಲ್ಲೂ ಮಹಿಳೆಯರಿಗೆ ಶೇ.33 ಮೀಸಲು ಘೋಷಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.