
ಮೈಸೂರು(ಸೆ.30): ಮುಂದಿನ ಬಾರಿ ದಸರಾ ಮಹೋತ್ಸವವನ್ನು ಬಿ.ಎಸ್.ಯಡಿಯೂರಪ್ಪ ಅವರು ಉದ್ಘಾಟಸಲಿದ್ದಾರೆ ಎಂದು ಸಂಸದೆ ಹಾಗೂ ಮಾಜಿ ಸಚಿವೆ ಶೋಭಾ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರು ಅರಮನೆ ಆವರಣದಲ್ಲಿ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಆಗಮಿಸಿರುವ ಗಜಪಡೆಯ ಮಾವುತರು, ಕಾವಾಡಿಗಳಿಗೆ ಶುಕ್ರವಾರ ಬೆಳಗಿನ ಉಪಾಹಾರ ಬಡಿಸಿದ ಬಳಿಕ ಮಾತನಾಡಿದ ಅವರು, ಈ ಬಾರಿಯ ದಸರಾ ಮಹೋತ್ಸವ ಯಶಸ್ವಿಯಾಗಲಿ. ಮುಂದಿನ ದಸರಾ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆಯಲಿದೆ. ಚಾಮುಂಡೇಶ್ವರಿ ದೇವಿಯ ಆಶೀರ್ವಾದ ನಮ್ಮ ಮೇಲಿದೆ. ಮುಂದೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದೇ ವೇಳೆ ಶೋಭಾ ಕರಂದ್ಲಾಜೆ ಅವರು ಶುಕ್ರವಾರ ಸಂಜೆ ಚಾಮುಂಡೇಶ್ವರಿ ಬೆಟ್ಟದ ಮೆಟ್ಟಿಲುಗಳನ್ನು ಹತ್ತುವ ಮೂಲಕ ತಮ್ಮ ಹರಕೆ ತೀರಿಸಿದರು.
ಮುಂದಿನ ಬಾರಿ ನಾವೇ ಅಧಿಕಾರಕ್ಕೆ: ಶೋಭಾ ಆಸೆ ಈಡೇರದು ಸಿಎಂ
ಮುಂದಿನ ಬಾರಿಯೂ ನಮ್ಮ ಪಕ್ಷವೇ ಅಧಿಕಾರಕ್ಕೆ ಬರಲಿದ್ದು ನಾವೇ ಬಂದು ದಸರಾ ಪೂಜೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಾಡಹಬ್ಬ ದಸರಾ ಮಹೋತ್ಸವ ಅಂಗವಾಗಿ ಶನಿವಾರ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರೊಡನೆ ಮಾತನಾಡಿದರು.
ಮುಂದಿನ ಬಾರಿಯೂ ನನ್ನ ನೇತೃತ್ವದಲ್ಲಿಯೇ ಚುನಾವಣೆ ನಡೆಯಲಿದ್ದು ನಮ್ಮ ಪಕ್ಷದ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಮೈಸೂರಿನಲ್ಲಿ ನಾವೇ ತಾನೇ ಇರುವುದು. ನಮ್ಮ ನೇತೃತ್ವದಲ್ಲಿಯೇ ದಸರೆ ನಡೆಯುತ್ತದೆ, ನಾವೇ ಬಂದು ಪೂಜೆ ಮಾಡುತ್ತೇವೆ ಮತ್ತು ನನ್ನ ನೇತೃತ್ವದಲ್ಲಿಯೇ ಚುನಾವಣೆ ನಡೆಯಲಿದೆ. ನಾವೇ ಅಧಿಕಾರದಲ್ಲಿ ಇರುತ್ತೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ನೀವೇ ಆಗುವಿರಾ ಎಂಬ ಪ್ರಶ್ನೆಗೆ, ಇದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಚುಟುಕಾಗಿ ಪ್ರತಿಕ್ರಿಯಿಸಿದರು.
ಶೋಭಾ ಆಸೆ ಈಡೇರದು
ಯಡಿಯೂರಪ್ಪ ಮುಖ್ಯಮಂತ್ರಿ ಆಗಬೇಕೆಂಬ ಸಂಸದೆ ಶೋಭಾ ಕರಂದ್ಲಾಜೆ ಅವರ ಆಸೆ ಈಡೇರುವುದು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಜನರ ಒಲವು ಬಿಜೆಪಿ ಪರವಾಗಿದೆ ಎಂಬುದು ಸುಳ್ಳು. ಯಡಿಯೂರಪ್ಪ ಮುಖ್ಯಮಂತ್ರಿ ಆಗಬೇಕು ಎಂಬುದು ಶೋಭಾ ಕರಂದ್ಲಾಜೆ ಅವರ ಆಸೆ. ಆದರೆ ಅದು ಸಾಧ್ಯವಿಲ್ಲ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.