
ಬರಪೀಡಿತ ಪ್ರದೇಶಗಳಲ್ಲಿ ಕೈಗೊಳ್ಳುವ ಪರಿಹಾರ ಕಾಮಗಾರಿಗಳಿಗೆ ಎನ್‍ಡಿಆರ್‍ಎಫ್‍ನಿಂದ 4703 ಕೋಟಿ ರೂ.ಗಳ ನೆರವು ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರನ್ನು ದೆಹಲಿಯ ಅವರ ನಿವಾಸದಲ್ಲಿ ಮುಖ್ಯಮಂತ್ರಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಇದಲ್ಲದೆ, ವಿಶೇಷ ಅನುದಾನ ರೂಪದಲ್ಲಿ 967.76 ಕೋಟಿ ರೂ.ಗಳನ್ನು ರಾಜ್ಯಕ್ಕೆ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಯವರು ಇದೇ ವೇಳೆ ಮನವಿ ಮಾಡಿದರು. ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಮತ್ತು ಪ್ರವಾಹದಿಂದಾಗಿ ಆಗಿರುವ ಹಾನಿ ಕುರಿತು ರಾಜನಾಥ ಸಿಂಗ್ ಅವರೊಂದಿಗೆ ಸಿಎಂ ಸಿದ್ದರಾಮಯ್ಯ ಸಮಾಲೋಚನೆ ನಡೆಸಿದರು.
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಅಪ್ಪಾಜಿ ನಾಡಗೌಡ ಈ ಸಂದರ್ಭದಲ್ಲಿ ಹಾಜರಿದ್ದರು. ಬರ ಪರಿಸ್ಥಿತಿಯಿಂದಾಗಿ 17193 ಕೊಟಿ ರೂ.ಗಳ ಹಾನಿ ಸಂಭವಿಸಿದೆ. ಬರ ಪರಿಹಾರ ಕಾಮಗಾರಿಗಳನ್ನು ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಕೈಗೊಂಡಿದ್ದು, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಮತ್ತು ಕೂಲಿ ಕಾರ್ಮಿಕರಿಗೆ ಉದ್ಯೋಗ ಒದಗಿಸುವ ವಿಚಾರದಲ್ಲಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತಿದೆ ಎಂದು ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವರಿಗೆ ವಿವರಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.