ದೇವೇಗೌಡರ ಮನವಿಗೆ ಸ್ಪಂದಿಸಿದ ಸಿಎಂ

Published : Aug 04, 2017, 09:14 PM ISTUpdated : Apr 11, 2018, 12:38 PM IST
ದೇವೇಗೌಡರ ಮನವಿಗೆ ಸ್ಪಂದಿಸಿದ ಸಿಎಂ

ಸಾರಾಂಶ

ಇದೇ ಭಾನುವಾರದಿಂದ ಒಂದು ವಾರ ನೀರು ಬಿಡುಗಡೆ. ಕೆರೆ ತುಂಬಿಸಲು ಮತ್ತು ಜಾನುವಾರುಗಳಿಗೆ ಕುಡಿಯಲು ನೀರು ಬಿಡಲಾಗುತ್ತಿದೆ.

ಬೆಂಗಳೂರು(ಆ.04): ಮಾಜಿ ಪ್ರಧಾನಿ ದೇವೇಗೌಡರ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಮಾವತಿ ಜಲಾಶಯದಿಂದ ಒಂದು ಟಿಎಂಸಿ ನೀರು ಬಿಡಲು ಸಮ್ಮತಿ ಸೂಚಿಸಿದ್ದಾರೆಂದು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕಾವೇರಿ ಕಣಿವೆ ಜಿಲ್ಲೆಗಳ ಉಸ್ತುವಾರಿ ಸಚಿವರ ಸಭೆಯ ಬಳಿಕ ಮಾತನಾಡಿ, ಕಾವೇರಿ ಜಲಾನಯನದ ನಾಲ್ಕು ಜಲಾಶಯಗಳಲ್ಲಿ  ಒಟ್ಟು  43 ಟಿಎಂಸಿ ನೀರು ಸಂಗ್ರಹವಿದೆ. ತಮಿಳುನಾಡಿಗೆ ಇಲ್ಲಿವರೆಗೆ 9 ಟಿಎಂಸಿ ನೀರು ಬಿಡಲಾಗಿದೆ. ಬೆಂಗಳೂರು, ಮೈಸೂರು ಜನರಿಗೆ ಕುಡಿಯಲು 34 ಟಿಎಂಸಿ ನೀರಿನ ಅಗತ್ಯತೆ ಇದೆ. ಇದೇ ವೇಳೆ, ಇದೇ 14 ರಂದು ಸರ್ವಪಕ್ಷಗಳ ಸಭೆ ಕರೆದಿದ್ದು, ಸಭೆಯಲ್ಲಿ ಕಾವೇರಿ ಕಣಿವೆ ಸಧ್ಯದ ಸ್ಥಿತಿ-ಗತಿಗಳ ಬಗ್ಗೆ ಮತ್ತು ತಮಿಳುನಾಡಿಗೆ ನೀರು ಹರಿಸುವ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು.

ದೇವೇಗೌಡರ ಮನವಿ ಮೇರೆಗೆ  ಹೇಮಾವತಿ ಜಲಾಶಯದಿಂದ ಒಂದು ಟಿಎಂಸಿ ಕುಡಿಯಲು ಬಿಡಲಾಗುತ್ತಿದೆ. ಹತ್ತು ದಿನಗಳ ಕಾಲ ನೀರು ಬಿಡುತ್ತಿದ್ದೇವೆ. ಇದೇ ಭಾನುವಾರದಿಂದ ಒಂದು ವಾರ ನೀರು ಬಿಡುಗಡೆ. ಕೆರೆ ತುಂಬಿಸಲು ಮತ್ತು ಜಾನುವಾರುಗಳಿಗೆ ಕುಡಿಯಲು ನೀರು ಬಿಡುತ್ತಿದ್ದೇವೆ. ಯಾವುದೇ ಬೆಳೆಗಳಿಗೆ ನೀರು ಬಿಡುತ್ತಿಲ್ಲ. ಈ ಬಗ್ಗೆ ದೇವೇಗೌಡ ಕೂಡ ಒತ್ತಾಯ ಮಾಡಿದ್ದರು ಎಂದು ಹೇಳಿದರು.

ಸಂಕಷ್ಟ ಸೂತ್ರ ಅನ್ವಯ ತಮಿಳುನಾಡಿಗೆ ನೀರು ಬಿಡುತ್ತಿದ್ದೇವೆ. ಪ್ರತಿ ನಿತ್ಯ 8 ಸಾವಿರ ಕ್ಯೂಸೆಕ್ಸ್ ನೀರು ಹರಿಸುತ್ತಿದ್ದೇವೆ.11 ಟಿಎಂಸಿ ನೀರು ಸಂಕಷ್ಟ ಸೂತ್ರ ಅನ್ವಯ ತಮಿಳುನಾಡಿಗೆ ಬಿಡಬೇಕಿದೆ ಎಂದು ಹೇಳಿದರು.

ಮುಖ್ಯಮಂತ್ರಿಗಳ ಸಭೆಯಲ್ಲಿ  ಟಿ.ಬಿ. ಜಯಚಂದ್ರ, ಹೆಚ್.ಸಿ. ಮಹದೇವಪ್ಪ, ಯು ಟಿ ಖಾದರ್, ಎ.ಮಂಜು, ಎಂ.ಆರ್. ಸೀತಾರಾಂ, ಎಂ. ಕೃಷ್ಣಪ್ಪ, ಆಂಜನೇಯ, ಕೃಷ್ಣ ಭೈರೇಗೌಡ, ಮಾಜಿ ಸಚಿವ ಅಂಬರೀಷ್, ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಡ್ವೋಕೇಟ್ ಜನರಲ್ ಸೇರಿ ಇತರೆ ಮುಖಂಡರು ಭಾಗಿಯಾಗಿದ್ದರು.

(ಸಾಂದರ್ಭಿ )

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಾಕಿಂಗ್: ರಾತ್ರಿಯಾದ್ರೆ ಬೆಡ್‌ರೂಂ ಬಳಿ ಬರ್ತಾನೆ ಸೈಕೋ! ಅಪರಿಚಿತನ ಕಾಟಕ್ಕೆ ಬೇಸತ್ತ ವೈದ್ಯೆ!
ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಬಿಹಾರದ ಸಚಿವ ನಿತಿನ್ ನಬಿ ಆಯ್ಕೆ, ಶುಭಕೋರಿದ ಜೆಪಿ ನಡ್ಡಾ