
ಬೆಂಗಳೂರು(ಜ.1): ‘ಕರ್ನಾಟಕದಲ್ಲಿ ಬೆಂಕಿ ಹಚ್ಚುವುದಕ್ಕೆ ಅಷ್ಟು ಸುಲಭವಾಗಿ ಬಿಡುವುದಿಲ್ಲ. ಹಚ್ಚಿದ ಕೂಡಲೇ ಆರಿಸಿಬಿಡುತ್ತೇವೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಭಾನುವಾರ ಪ್ರೆಸ್‌ಕ್ಲಬ್ ಆಫ್ ಬೆಂಗಳೂರು ಪ್ರದಾನ ಮಾಡಿದ ‘ಪ್ರೆಸ್‌ಕ್ಲಬ್ ವರ್ಷದ ವ್ಯಕ್ತಿ’ ಪ್ರಶಸ್ತಿ ಸ್ವೀಕರಿಸಿದ ನಂತರ ಸುದ್ದಿಗಾರರ ಜೊತೆ ಅವರು ಮಾತನಾಡಿದರು.
ನಾಲ್ಕು ತಿಂಗಳ ಹಿಂದೆ ಅಮಿತ್ ಶಾ ಕರ್ನಾಟಕಕ್ಕೆ ಬಂದುಹೋದ ನಂತರ ಕೆಲ ಅಹಿತಕರ ಘಟನೆಗಳು ನಡೆದಿದ್ದವು. ಈಗ ಮತ್ತೆ ಬಂದಿದ್ದಾರೆ. ಈ ಬಗ್ಗೆ ಏನು ಹೇಳುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಅಮಿತ್ ಶಾ ರಾಜ್ಯದಲ್ಲಿ ಗಲಭೆ ಮಾಡಲು ಹಾಗೂ ಬೆಂಕಿ ಹಚ್ಚಲು ಹೇಳಿರುವುದಾಗಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಬೆಂಕಿ ಹಚ್ಚುವುದಕ್ಕೆ ಸುಲಭವಾಗಿ ಬಿಡೋದಿಲ್ಲ. ಹಚ್ಚಿದ ಕೂಡಲೇ ಆರಿಸುತ್ತೇವೆ. ಅವೆಲ್ಲ ಇಲ್ಲಿ ನಡೆಯೋದಿಲ್ಲ ಎಂದರು. ಒಬ್ಬ ರಾಜಕಾರಣಿಯಾದವನು ಸಮಾಜದಲ್ಲಿ ಸಾಮರಸ್ಯ ಇರಬೇಕು ಹಾಗೂ ಕಾಪಾಡಬೇಕು ಎಂದು ಇಚ್ಛೆಪಡುತ್ತಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.