ಮಹಾರಾಷ್ಟ್ರಕ್ಕೆ ಸಿಎಂ: ನೀರಾವರಿ ಯೋಜನೆಗಳ ಬಗ್ಗೆ ಮಹತ್ವದ ಚರ್ಚೆ

By Web DeskFirst Published Sep 3, 2019, 8:18 AM IST
Highlights

ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಅವರು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ. ಈ ಭೇಟಿಯಲ್ಲಿ ಮಾಹಾರಾಷ್ಟ್ರದಲ್ಲಿ ಸಿಎಂ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಹಲವು ಮಹತ್ವ ವಿಚಾರಗಳ ಬಗ್ಗೆ ಚರ್ಚೆ ಮಾಡಲಿದ್ದಾರೆ. ಮಹದಾಯಿ ಹಾಗೂ,ಕೃಷ್ಣಾ ಮೇಲ್ದಂಡೆ ಯೋಜನೆಯ ಬಗ್ಗೆ ಚರ್ಚಿಸಲಿದ್ದಾರೆ.

ಬೆಂಗಳೂರು (ಸೆ.03): ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಅವರು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ. ಈ ಭೇಟಿಯಲ್ಲಿ ಮಾಹಾರಾಷ್ಟ್ರದಲ್ಲಿ ಸಿಎಂ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಹಲವು ಮಹತ್ವ ವಿಚಾರಗಳ ಬಗ್ಗೆ ಚರ್ಚೆ ಮಾಡಲಿದ್ದಾರೆ. ಮಹದಾಯಿ ಹಾಗೂ,ಕೃಷ್ಣಾ ಮೇಲ್ದಂಡೆ ಯೋಜನೆಯ ಬಗ್ಗೆ ಚರ್ಚಿಸಲಿದ್ದಾರೆ

ಮಹಾರಾಷ್ಟ್ರಗೆ ತೆರಳುವ ಮುನ್ನ ಹೇಳಿಕೆ ನೀಡಿದ ಸಿಎಂ ಯಡಿಯೂರಪ್ಪ, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನಾವಿಸ್ ಅವರನ್ನು ಭೇಟಿಯಾಗಲಿದ್ದೇನೆ. ಪ್ರಮುಖವಾಗಿ ಮಹಾದಾಯಿ ವಿಚಾರವಾಗಿ ನಾವು ಚರ್ಚೆ ನಡೆಸಲಿದ್ದೇವೆ. ಜೊತೆಗೆ ಕೃಷ್ಣಾ ಮೆಲ್ದಂಡೆ ಯೋಜನೆ ಸೇರಿದಂತೆ ನೀರಾವರಿ ಯೋಜನೆಗಳ ಬಗ್ಗೆಯೂ ಮಾತುಕತೆ ನಡೆಸುತ್ತೇವೆ ಎಂದಿದ್ದಾರೆ.

ಡಿಕೆ ಶಿವಕುಮಾರ್ ಕಣ್ಣೀರಿಗೆ ಮಿಡಿದ ಕುಮಾರಸ್ವಾಮಿ ಮನ

ಸೆ. 06ರಂದು ಸಚಿವ ಸಂಪುಟ ಸಭೆ ನಡೆಯಲಿದೆ. ಆ ಸಭೆಯಲ್ಲಿ ಕೆಲವೊಂದು ತೀರ್ಮಾನಗಳನ್ನು ಮಾಡಲಿದ್ದೇವೆ. ಅಂದು ಪ್ರಧಾನಿ ನರೇಂದ್ರ ಮೋದಿಯೂ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅವರನ್ನು ಭೇಟಿ ಮಾಡಿ ಪ್ರವಾಹದ ಬಗ್ಗೆ ಮನವರಿಕೆ ಮಾಡಿಕೊಟ್ಟು, ಪರಿಹಾರಕ್ಕಾಗಿ ಮನವಿ ಮಾಡಲಿದ್ದೇವೆ. ಹಾಗೆಯೇ ಕೃಷ್ಣಾ ಯೋಜನೆ  ಬಗ್ಗೆ ಪ್ರಧಾನಿ ಜೊತೆ ಮಾತನಾಡಿ, ಯೋಜನೆಗೆ ನೆರವನ್ನು ಕೇಳುತ್ತೇವೆ ಎಂದರು.

click me!