ಬೆಂಗಳೂರು [ಜು.27] : ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೊದಲ ದಿನವೇ ಬಿ.ಎಸ್.ಯಡಿಯೂರಪ್ಪ ಅವರು ಆಪ್ತ ಸಹಾಯಕ ಸಂತೋಷ್ ವಿರುದ್ಧ ಗರಂ ಆದ ಪ್ರಸಂಗ ನಡೆಯಿತು.
ಪ್ರಮಾಣ ವಚನ ಕಾರ್ಯಕ್ರಮದ ಬಳಿಕ ಯಡಿಯೂರಪ್ಪ ಅವರು ರಾಜಭವನದಿಂದ ವಿಧಾನಸೌಧದತ್ತ ತೆರಳಲು ಮುಂದಾದರು. ಈ ವೇಳೆ ತಮ್ಮ ವಾಹನ ಎಲ್ಲಿ? ಎಂದು ಕೇಳಿದ ಬಳಿಕ ಯಾಕೆ ಅಷ್ಟು ದೂರ ಕಾರನ್ನು ನಿಲ್ಲಿಸಲಾಗಿದೆ ಎಂದು ಕೋಪದಿಂದಲೇ ಆಪ್ತ ಸಹಾಯಕ ಸಂತೋಷ್‌ರನ್ನು ಪ್ರಶ್ನಿಸಿದರು.
ಯಡಿಯೂರಪ್ಪ ಕೋಪವನ್ನು ಕಂಡ ಸಂತೋಷ್, ಕಾರು ಚಾಲಕ ತಿಂಡಿ ತಿನ್ನಲು ಹೋಗಿದ್ದಾನೆ ಎಂದರು. ಇದರಿಂದ ಮತ್ತಷ್ಟು ಕೋಪಗೊಂಡ ಯಡಿಯೂರಪ್ಪ ಅವರು ತಿಂಡಿ ತಿನ್ನೋಕೆ ಹೋಗು ಎಂದು ಹೇಳಿಬಿಡು ಎಂದು ಸಿಟ್ಟು ವ್ಯಕ್ತಪಡಿಸಿದರು. ಸ್ಥಳಕ್ಕೆ ಬಂದ ಮತ್ತೊಂದು ಕಾರನ್ನು ಹತ್ತಿ ವಿಧಾನಸೌಧದತ್ತ ಪ್ರಯಾಣಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.