ಇವರು ಮುಖ್ಯಮಂತ್ರಿ ಆದಮೇಲೆ ಶಾಸಕರಾದರು, ಅನಂತರ ಎಸ್.ಎಂ.ಕೃಷ್ಣ ವಿರುದ್ಧ ಸೋತರು

By Suvarna Web DeskFirst Published Mar 2, 2018, 9:04 PM IST
Highlights

. 2004ರಲ್ಲಿ ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಎಸ್.ಎಂ.ಕೃಷ್ಣ ಅವರ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಎರಡನೇ ಸ್ಥಾನ ಪಡೆದಿದ್ದರು

ಕನ್ನಡ ಚಿತ್ರರಂಗದ ಹೆಸರಾಂತ ನಟ ‘ಮುಖ್ಯಮಂತ್ರಿ’ ಚಂದ್ರು ಅವರು 1985ರಲ್ಲಿ ಜನತಾ ಪಕ್ಷದ ಅಭ್ಯರ್ಥಿಯಾಗಿ ಗೌರಿಬಿದನೂರು ವಿಧಾನಸಭಾ ಕ್ಷೇತ್ರದಿಂದ ಮೊದಲ ಪ್ರಯತ್ನದಲ್ಲೇ ಸುಮಾರು 6 ಸಾವಿರ ಮತಗಳಿಂದ ಜಯಭೇರಿ ಬಾರಿಸಿ ದ್ದರು.

1989ರಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಜನತಾದಳದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು. 2004ರಲ್ಲಿ ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಎಸ್.ಎಂ.ಕೃಷ್ಣ ಅವರ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಎರಡನೇ ಸ್ಥಾನ ಪಡೆದಿದ್ದರು. ಈ ನಡುವೆ ಬಿಜೆಪಿಯಿಂದ ಎರಡು ಬಾರಿ ವಿಧಾನಪರಿಷತ್ ಸದಸ್ಯರಾಗಿಯೂ ಆಯ್ಕೆಯಾಗಿದ್ದರು. ಸದ್ಯ ಕಾಂಗ್ರೆಸ್ಸಿನಲ್ಲಿ ಗುರುತಿಸಿಕೊಂಡಿದ್ದಾರೆ.

click me!