ಡಾ. ಕಲಬುರ್ಗಿ ಹಂತಕರ ಶೀಘ್ರ ಪತ್ತೆಗೆ ಸಿಐಡಿಗೆ ಸಿಎಂ ಸೂಚನೆ

Published : Aug 28, 2017, 09:33 PM ISTUpdated : Apr 11, 2018, 12:41 PM IST
ಡಾ. ಕಲಬುರ್ಗಿ ಹಂತಕರ ಶೀಘ್ರ ಪತ್ತೆಗೆ ಸಿಐಡಿಗೆ ಸಿಎಂ ಸೂಚನೆ

ಸಾರಾಂಶ

ಖ್ಯಾತ ಸಂಶೋಧಕ ಎಂ ಎಂ ಕಲಬುರ್ಗಿ ಹತ್ಯೆಯ ತನಿಖೆಯನ್ನು ಇನ್ನಷ್ಟು ಕ್ಷಿಪ್ರಗತಿಯಲ್ಲಿ ನಡೆಸುವಂತೆ ಸಿಐಡಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಡಾ. ಕಲಬುರ್ಗಿ ಅವರ ಹತ್ಯೆಯ ತನಿಖೆಯನ್ನು ತೀವ್ರಗೊಳಿಸುವಂತೆ ಪ್ರಗತಿಪರ ಸಂಘಟನೆಗಳು ರಾಜ್ಯಾದ್ಯಂತ ನಡೆಸುತ್ತಿರುವ ಹೋರಾಟ ಕಾವು ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಈ ಹೇಳಿಕೆ ನೀಡಿರುವುದು ಗಮನಾರ್ಹ.  

ಬೆಂಗಳೂರು (ಆ.28): ಖ್ಯಾತ ಸಂಶೋಧಕ ಎಂ ಎಂ ಕಲಬುರ್ಗಿ ಹತ್ಯೆಯ ತನಿಖೆಯನ್ನು ಇನ್ನಷ್ಟು ಕ್ಷಿಪ್ರಗತಿಯಲ್ಲಿ ನಡೆಸುವಂತೆ ಸಿಐಡಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಡಾ. ಕಲಬುರ್ಗಿ ಅವರ ಹತ್ಯೆಯ ತನಿಖೆಯನ್ನು ತೀವ್ರಗೊಳಿಸುವಂತೆ ಪ್ರಗತಿಪರ ಸಂಘಟನೆಗಳು ರಾಜ್ಯಾದ್ಯಂತ ನಡೆಸುತ್ತಿರುವ ಹೋರಾಟ ಕಾವು ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಈ ಹೇಳಿಕೆ ನೀಡಿರುವುದು ಗಮನಾರ್ಹ.  

2015 ಆ.30 ರಂದು ಕಲಬುರ್ಗಿಯವರನ್ನು ಅವರ ನಿವಾಸದಲ್ಲಿ ಹತ್ಯೆ ಮಾಡಲಾಗಿತ್ತು. ಇದು ಇಡೀ ಕರ್ನಾಟಕವನ್ನೇ ಬೆಚ್ಚಿ ಬೀಳಿಸಿತ್ತು. ಕರ್ನಾಟಕ ಸರ್ಕಾರ ಹಂತಕರನ್ನು ಪತ್ತೆ ಹಚ್ಚಲು ಕೂಡಲೇ ಕ್ರಮಗಳನ್ನು ಕೈಗೊಂಡು ಸೂಪರಿಟೆಂಡೆಂಟ್ ಪೊಲೀಸ್ ದರ್ಜೆಯ ಇಬ್ಬರು, 27 ಇತರೆ ಅಧಿಕಾರಿಗಳು ಹಾಗೂ 30 ತಾಂತ್ರಿಕ ವಿಶ್ಲೇಷಕರ ಸಮರ್ಥ ತಂಡವನ್ನು ರಚಿಸಿ ತನಿಖೆಯನ್ನು ಚುರುಕುಗೊಳಿಸಲು ಪ್ರಕರಣವನ್ನು  ಸಿಐಡಿಗೆ ವಹಿಸಿದೆ. ದಾಬೋಲ್ಕರ್, ಪನ್ಸಾರೆ ಹತ್ಯೆ ಪ್ರಕರಣಗಳನ್ನು ತನಿಖೆ ನಡೆಸುತ್ತಿರುವ ತಂಡಗಳೊಂದಿಗೆ ರಾಜ್ಯದ ತನಿಖಾ ತಂಡವು ನಿರಂತರ ಸಂಪರ್ಕದಲ್ಲಿದೆ. ಇವೆರಡೂ ಪ್ರಕರಣಗಳಲ್ಲಿ ಸಾಮ್ಯತೆಗಳಿವೆ ಎಂಬುದನ್ನು ಗಮನಿಸಿವೆ. ವಿಭಿನ್ನ ದೃಷ್ಟಿಕೋನ ಹೊಂದಿರುವ ಬುದ್ದಿಜೀವಿಗಳ ಮೇಲಿನ ದಾಳಿ ಇದರ ಹಿಂದಿರುವ ದ್ದೇಶ ಎಂಬುದು ಸಾಬೀತಾಗಿದೆ.

ನಮ್ಮ ಸರ್ಕಾರ ರಾಜ್ಯದಲ್ಲಿ ಅಸಹಿಷ್ಣುತೆ ಹರಡುವುದನ್ನು ಬಲವಾಗಿ ಕಿತ್ತೊಗೆಯಲಿದೆ. ಅಲ್ಲದೇ ಅಂಧಾಭಿಮಾನ ದೃಷ್ಟಿ ಹೊತ್ತು ಬರಹಗಾರರು, ಬುದ್ದಿಜೀವಿಗಳಲ್ಲಿ ಭಯದ ವಾತಾವರಣ ಸೃಷ್ಟಿಸುವವರನ್ನು ಮಟ್ಟ ಹಾಕಲಿದೆ. ಅಪರಾಧಿಗಳನ್ನು ಹಿಡಿಯುವಲ್ಲಿ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ನಮ್ಮ ತನಿಖಾ ತಂಡ ಈ ಪ್ರಕರಣ ಬಗೆಹರಿಸುವಲ್ಲಿ ಅಂತಿಮ ಘಟ್ಟ ತಲುಪಿದೆ. ಶೀಘ್ರದಲ್ಲಿಯೇ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ  ಭರವಸೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಣವೀರ್ ನಟನೆಯ ಧುರಂಧರ್ ಸಿನಿಮಾದ ಕತೆ ಭಾರತೀಯ ಸೇನೆಯ ಹೀರೋ ಮೇಜರ್ ಮೋಹಿತ್ ಶರ್ಮಾ ಅವರದ್ದಾ?
ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?