
ಬೆಂಗಳೂರು : ಬಿಬಿಎಂಪಿ ಅನುದಾನದ ಮೇಲೆ ಸಿಎಂ ಕುಮಾರಸ್ವಾಮಿ ಕಣ್ಣಿಟ್ಟಿದ್ದಾರಾ ಎನ್ನುವ ಪ್ರಶ್ನೆ ಇದೀಗ ಮೂಡಿದೆ. ಘನತ್ಯಾಜ್ಯ ವಿಲೇವಾರಿಗೆ ಮೀಸಲಿಟ್ಟಿದ್ದ ಹಣ ಬೇರೆ ಕಾಮಗಾರಿಗಳಿಗೆ ಬಳಕೆ ಮಾಡಲು ತೀರ್ಮಾನ ಮಾಡಿದ್ದಾರಾ ಎನ್ನುವ ಅನುಮಾನ ಕಾಡಿದೆ. ಕಸ ನಿರ್ವಹಣೆಗೆ ಮೀಸಲಿಟ್ಟಿದ್ದ 115 ಕೋಟಿ ಹಣವನ್ನು ಬೇರೆ ಕಾಮಗಾರಿ ಬಳಕೆ ಮಾಡಲು ತೀರ್ಮಾನಿಸಿದ್ದು, ಜಾಬ್ ಕೋಡ್ ನೀಡಿದ್ದ ಬಿಬಿಎಂಪಿಗೆ ಸಿಎಂ ಕುಮಾರಸ್ವಾಮಿ ಚಾಟಿ ಬೀಸಿದ್ದಾರೆ.
ಪಾರ್ಕ್, ಮುಖ್ಯರಸ್ತೆಗಳ ನಿರ್ವಹಣೆಗೆ ಬಿಬಿಎಂಪಿ ಜಾಬ್ ಕೋಡ್ ನೀಡಿತ್ತು. ಆದರೆ ಇದೀಗ ಮೇಯರ್ ಹಾಗೂ ಕಮಿಷನರ್ ಒಪ್ಪಿಗೆ ಪಡೆದಿದ್ದ ಕಾಮಗಾರಿಗಳು ರಿಜೆಕ್ಟ್ ಆಗಿದೆ. ನಗರಾಭಿವೃದ್ದಿ ಇಲಾಖೆಯ ಒಪ್ಪಿಗೆಗೆ ಕಳುಹಿಸಿದ್ದ ಬಿಬಿಎಂಪಿಯ 115 ಕೋಟಿ ಕಾರ್ಯಾದೇಶಗಳನ್ನು ಸಿಎಂ ರಿಜೆಕ್ಟ್ ಮಾಡಿದ್ದಾರೆ.
ಜಾಬ್‌ಕೋಡ್ ರದ್ದುಪಡಿಸುವುದಾಗಿ ಬಿಬಿಎಂಪಿಗೆ ನಗರಾಭಿವೃದ್ಧಿ ಇಲಾಖೆ ಆದೇಶ ನೀಡಿದೆ. ಈ ಹಿಂದೆ ಜಾಬ್‌ಕೋಡ್ ಅವ್ಯವಹಾರದ ಬಗ್ಗೆ ಜೆಡಿಎಸ್ ಸದಸ್ಯರು ಸಿಎಂ ಗಮನಕ್ಕೆ ತಂದಿದ್ದು, 115 ಕೋಟಿ ಹಣಕ್ಕೆ ಈಗಾಗಲೇ ಮೇಯರ್ ಸಂಪತ್ ರಾಜ್ ಕೂಡ ಕಮಿಷನ್ ಪಡೆದಿದ್ದರು ಎನ್ನುವ ಬಗ್ಗೆಯೂ ಮಾಹಿತಿ ನೀಡಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.