
ಮೈಸೂರು (ಅ.10): ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ - 2016 ನ್ನು ಈ ಬಾರಿ ದಸರಾ ಸರಳವಾಗಿ ಆಚರಿಸುತ್ತಿದ್ದೇವೆ. ಆದರೂ ಪ್ರವಾಸಿಗರ ಸಂಖ್ಯೆಯ ಹೆಚ್ಚಳ ಸಂತಸ ತಂದಿದೆ ಎಂದು ದಸರಾ ಕಾರ್ಯಕ್ರಮಕ್ಕೆ ಬಂದಿದ್ದ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಮಾತನಾಡುತ್ತಾ ರಾಜ್ಯದಲ್ಲಿ ಭೀಕರ ಬರಗಾಲವಿದೆ. ಇದನ್ನೇ ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಆರೋಪ ಮಾಡುತ್ತಿವೆ. ಅವರಿಗೆ ಚರ್ಚಿಸಲು ಬೇರೆ ವಿಷಯವಿಲ್ಲ. 110 ತಾಲೂಕುಗಳನ್ನು ಬರ ಪೀಡಿತ ತಾಲೂಕು ಎಂದು ಘೋಷಣೆ ಮಾಡಲಾಗಿದೆ. ಅವರಿಗೆ ಅಗತ್ಯವಾದ ಪರಿಹಾರ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.