
ಬೆಂಗಳೂರು, (ನ.12): ಕೇಂದ್ರ ಸಚಿವ ಅನಂತಕುಮಾರ್ ನಿಧನಕ್ಕೆ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಇಂದು ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿದ ರಾಜ್ಯ ಸರ್ಕಾರ
ರಾಜಕಾಣ ಮೀರಿದ ಸ್ನೇಹ ನಮ್ಮ ಕುಟುಂಬಗಳ ನಡುವೆ ಇತ್ತು. ಸ್ನೇಹಕ್ಕೆ ಅತ್ಯಂತ ಮಹತ್ವ ನೀಡುತ್ತಿದ್ದ ವ್ಯಕ್ತಿ ಅವರಾಗಿದ್ದರು. ಇಂದು ಓರ್ವ ಆತ್ಮೀಯ ಗೆಳೆಯನನ್ನು ಕಳೆದುಕೊಂಡಂತಾಗಿದೆ ಎಂದು ಅವರು ಕಂಬನಿ ಮಿಡಿದಿದ್ದಾರೆ.
Live Updates: ಕೇಂದ್ರ ಸಚಿವ ಅನಂತ ಕುಮಾರ್ ಇನ್ನಿಲ್ಲ
ಮೌಲ್ಯಾಧಾರಿತ ರಾಜಕಾರಣದಲ್ಲಿ ನಂಬಿಕೆಯಿಟ್ಟಿದ್ದ ಅವರು ಸಂಸದರಾಗಿ, ಕೇಂದ್ರ ಸಚಿವರಾಗಿ ದೇಶಕ್ಕೆ ನೀಡಿದ ಕೊಡುಗೆ ಆನನ್ಯವಾದದ್ದು. ತಮ್ಮ ಜನಪರ ಕಾಳಜಿ, ಕಾರ್ಯಚಟುವಟಿಕೆಗಳಿಂದಾಗಿ ಬೆಂಗಳೂರಿಗರ ಕಣ್ಮಣಿ ಆಗಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.
ಅಗಲಿದ ಕೇಂದ್ರ ಸಚಿವ ಅನಂತಕುಮಾರ್ ಸಂಕ್ಷಿಪ್ತ ಪರಿಚಯ
ಭಗವಂತನು ಅವರ ಆತ್ಮಕ್ಕೆ ಚಿರ ಶಾಂತಿಯನ್ನು ನೀಡಲಿ. ಕುಟುಂಬ ವರ್ಗ ಹಾಗೂ ಅಪಾರ ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖ ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.