
ಬೆಂಗಳೂರು [ಜು.23] : ಇಂದು ರಾಜ್ಯ ರಾಜಕೀಯ ನಾಟಕಕ್ಕೆ ತೆರೆ ಬೀಳುವ ಲಕ್ಷಣ ಕಾಣುತ್ತಿದೆ. ವಿಶ್ವಾಸಮತ ಯಾಚನೆ ಡೆಡ್ ಲೈನ್ ಗೆ ಕೌಂಟ್ ಡೌನ್ ಶುರುವಾಗಿದ್ದು, ಆತಂಕದಲ್ಲಿರುವ ಸಿಎಂ ತಡವಾಗಿ ಕಲಾಪಕ್ಕೆ ಆಗಮಿಸಿದ್ದಾರೆ.
ಇನ್ನು ಸರ್ಕಾರ ಉಳಿಸಿಕೊಳ್ಳಲು ಶತಪ್ರಯತ್ನ ಮಾಡಿದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಪ್ರಯತ್ನ ಫಲಿಸಿದ ಲಕ್ಷಣ ಮಾತ್ರ ಕಾಣುತ್ತಿಲ್ಲ. ಕಲಾಪಕ್ಕೆ ತಡವಾಗಿ ಆಗಮಿಸಿದ ಸಿಎಂ ವಿದಾಯದಭಾಷಣಕ್ಕೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗೆ ಇಲ್ಲಿ ಕ್ಲಿಕ್ಕಿಸಿ
ಬೆಳಗ್ಗಿನಿಂದ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿಯೇ ಇದ್ದ ಸಿಎಂ, ಹಲವು ನಾಯಕರೊಂದಿಗೆ ಚರ್ಚೆ ನಡೆಸಿದರೂ ಯಾವ ಫಲ ಸಿಗಲಿಲ್ಲ.
ಅಲ್ಲದೇ ದೋಸ್ತಿ ಸರ್ಕಾರ ಉಳಿಸಿಕೊಳ್ಳುವ ಯತ್ನ ವಿಫಲವಾದ ಹಿನ್ನೆಲೆ ಆತಂಕದಲ್ಲಿಯೇ ಇದ್ದು, ಮಧ್ಯಾಹ್ನದ ನಂತರ ವಿಧಾನಸೌಧಕ್ಕೆ ಆಗಮಿಸಿ ಕಲಾಪಕ್ಕೆ ಹಾಜರಾಗುವ ಮುನ್ನ ಕಡತಕ್ಕೆ ಸಹಿ ಮಾಡಿದ್ದಾರೆ.
ಕಳೆದ 18 ದಿನಗಳಿಂದ ನಡೆಯುತ್ತಿರುವ ಹೈಡ್ರಾಮಾದಲ್ಲಿ ದೋಸ್ತಿಗೆ ಗೆಲುವು ಮರೀಚಿಕೆಯಾಗಿದ್ದು, ಇದರಿಂದ ಸಿಎಂ ರಾಜೀನಾಮೆಯೂ ಅನಿವಾರ್ಯವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.