
ಬೆಂಗಳೂರು : ಯಾರು ಎಷ್ಟೇ ಸದ್ದು ಮಾಡಿದರೂ ಯಾವುದೇ ಪ್ರಯೋಜನ ಇಲ್ಲ. ಮೈತ್ರಿ ಸರ್ಕಾರವು ಬಂಡೆ ತರಹ ಭದ್ರವಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತಿಪಕ್ಷ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 167 ಅಲ್ಪಸಂಖ್ಯಾತ ಸಮುದಾಯದ ಯುವಕರಿಗೆ ಬುಧವಾರ ವಿಧಾನಸೌಧದ ಮುಂದೆ ಟ್ಯಾಕ್ಸಿ ಮತ್ತು ಸರಕು ಸಾಗಾಣಿಕೆ ವಾಹನಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.
ಕರ್ನಾಟಕದಲ್ಲಿ ಶೀಘ್ರ ಕಂಪನವಾಗಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೈಗೊಳ್ಳುವ ತೀರ್ಮಾನದ ಮೇಲೆ ರಾಜಕೀಯದಲ್ಲಿ ಬದಲಾವಣೆಯಾಗಲಿದೆ ಎಂಬ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಇಂತಹ ಹೇಳಿಕೆಯು ಪ್ರತಿಕ್ರಿಯೆಗೆ ಅರ್ಹವಲ್ಲ. ಕಳೆದ ಆರು ತಿಂಗಳನಿಂದಲೂ ಈ ರೀತಿಯ ಸೌಂಡ್ ಮಾಡಲಾಗುತ್ತಿದೆ. ಅದರಿಂದಾಗುವ ಪ್ರಯೋಜನವೇನು? ಯಾವುದೇ ಉಪಯೋಗವಾಗಿಲ್ಲ. ಮೈತ್ರಿ ಸರ್ಕಾರವು ಬಂಡೆಯಂತೆ ಭದ್ರವಾಗಿದೆ ಎಂದು ಹೇಳಿದರು.
ಬಿಜೆಪಿ ನಾಯಕರು ಕಳೆದ ಆರು ತಿಂಗಳಿನಿಂದ ಸದ್ದು ಮಾಡುತ್ತಲೇ ಇದ್ದಾರೆ. ಸದ್ದು ಮಾಡುವುದಷ್ಟೇ ಬಿಜೆಪಿ ಕೆಲಸ. ಸರ್ಕಾರಕ್ಕೆ ಮಾತ್ರ ಏನು ಆಗಿಲ್ಲ. ಸರ್ಕಾರ ಪತನದ ವಿಚಾರ ಈಗ ಸತ್ತು ಹೋಗಿದೆ. ಸಮ್ಮಿಶ್ರ ಸರ್ಕಾರ ಅಸ್ತಿತ್ವ ಬಂದಾಗಿನಿಂದಲೂ ಸರ್ಕಾರ ಬೀಳಿಸುವ ಮಾತು ಆಡುತ್ತಿದ್ದಾರೆ. ಆದರೆ ಏನು ಮಾಡಲು ಸಾಧ್ಯವಾಗಿಲ್ಲ ಎಂದು ಕಿಡಿಕಾರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.