ಬಿಎಸ್ ವೈ ಬಗ್ಗೆ ಎಚ್‌ಡಿಕೆ ಹೊಸ ಬಾಂಬ್

Published : Jun 18, 2019, 07:28 AM IST
ಬಿಎಸ್ ವೈ ಬಗ್ಗೆ ಎಚ್‌ಡಿಕೆ ಹೊಸ ಬಾಂಬ್

ಸಾರಾಂಶ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಇದೀಗ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.  ಜಿಂದಾಲ್ ನಿಂದ ಯಡಿಯೂರಪ್ಪ 20 ಕಿಕ್ ಬ್ಯಾಕ್ ಮೂಲಕ ಪಡೆದಿದ್ದರು ಎಂದು ಹೇಳಿದ್ದಾರೆ. 

ಚನ್ನಪಟ್ಟಣ :  ಜಿಂದಾಲ್‌ಗೆ ಬಳ್ಳಾರಿಯಲ್ಲಿ ಭೂಮಿ ಪರಭಾರೆ ವಿರುದ್ಧ ಹೋರಾಟ ನಡೆಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದು, ಜಿಂದಾಲ್‌ನಿಂದ 20 ಕೋಟಿ ರು. ಕಿಕ್‌ಬ್ಯಾಕ್‌ ಅನ್ನು ಚೆಕ್‌ ಮೂಲಕ ಯಡಿಯೂರಪ್ಪ ಪಡೆದಿದ್ದನ್ನು ನಾನೇ ಬಹಿರಂಗ ಪಡಿಸಿದ್ದೆ. ಇದನ್ನು ಮರೆತಿರುವ ಅವರು ನನ್ನ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಸೋಮವಾರ ನಡೆಸಿದ ಜನತಾದರ್ಶನದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಂದಾಲ್‌ಗೆ ಜಮೀನಿನ ಲೀಸ್‌ ಕಂ ಸೇಲ್‌ ಪತ್ರಕ್ಕೆ ಸಹಿ ಹಾಕಿದವರು ಯಾರು ಎಂಬುದನ್ನು ಮೊದಲು ಅರಿತು, ಆನಂತರ ನನ್ನ ವಿರುದ್ಧ ಪ್ರತಿಭಟನೆ ನಡೆಸಬೇಕು ಎಂದು ಯಡಿಯೂರಪ್ಪಗೆ ಟಾಂಗ್‌ ನೀಡಿದರು.

ಬಿಜೆಪಿ ನಾಯಕರು ಜನರ ದಿಕ್ಕು ತಪ್ಪಿಸಲು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ನೇರವಾಗಿ ನನ್ನ ಬಳಿಗೆ ಬಂದು ರಾಜ್ಯದ ಸಮಸ್ಯೆಗಳು ಮತ್ತು ಅಭಿವೃದ್ಧಿ ವಿಚಾರದಲ್ಲಿ ಚರ್ಚೆ ನಡೆಸುವುದನ್ನು ಬಿಟ್ಟು ಪ್ರತಿಭಟನೆಯ ಹೆಸರಿನಲ್ಲಿ ಸಮಯ ವ್ಯರ್ಥ ಮಾಡುತ್ತಿದ್ದಾರೆ. ಐಎಂಎ, ಬರ ನಿರ್ವಹಣೆ, ಜಿಂದಾಲ್‌ ಹೀಗೆ ಯಾವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷದ ನಾಯಕರು ಸೇರಿದಂತೆ ಯಾರು ಬೇಕಾದರೂ ಬಂದು ನನ್ನೊಂದಿಗೆ ಚರ್ಚಿಸಲಿ ಎಂದು ಪಂಥಾಹ್ವಾನ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೈಲು ಟಿಕೆಟ್ ಬುಕಿಂಗ್‌ನಿಂದ ಪ್ರಯಾಣ , ಹಿರಿಯ ನಾಗರೀಕರಿಗಿದೆ ಭರ್ಜರಿ ವಿನಾಯಿತಿ
ಡಾ ಜಿ ಪರಮೇಶ್ವರ ರಾಜ್ಯದ ಸಿಎಂ ಆಗಬೇಕು, ರಾಜಕೀಯದಲ್ಲಿ ಸಂಚಲನ ಮೂಡಿಸೋ ಹೇಳಿಕೆ ಕೊಟ್ಟ ಕೇಂದ್ರ ಸಚಿವ ವಿ. ಸೋಮಣ್ಣ!