‘ಅತೃಪ್ತ ಶಾಸಕರ ನಿರ್ಧಾರ ಅವರಿಗೆ ಮಾರಕ’

By Web DeskFirst Published Jul 11, 2019, 8:19 AM IST
Highlights

ರಾಜ್ಯ ರಾಜಕೀಯದ ಹೈ ಡ್ರಾಮಾ ಮುಂದುವರಿದಿದೆ. ರಾಜ್ಯದ ಅನೇಕ ಶಾಸಕರು ರಾಜೀನಾಮೆ ನೀಡಿದ್ದು, ಇದೀಗ ಅವರ ನಿರ್ಧಾರ ಅವರಿಗೆ ಮಾರಕವಾಗಲಿದೆ ಎನ್ನಲಾಗುತ್ತಿದೆ. 

ಬೆಂಗಳೂರು  [ಜು.11]:  ಅತೃಪ್ತ ಶಾಸಕರು ತೆಗೆದುಕೊಳ್ಳುತ್ತಿರುವ ನಿರ್ಧಾರ ಅವರ ಹಾಗೂ ರಾಜ್ಯದ ಭವಿಷ್ಯಕ್ಕೆ ಮಾರಕವಾಗಲಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ರಾಜೀನಾಮೆ ನೀಡಿರುವ ಅತೃಪ್ತ ಶಾಸಕರ ವಿರುದ್ಧ ಕಿಡಿ ಕಾರಿದರು.

ರಾಜಕೀಯ ಜಂಜಾಟದ ನಡುವೆಯೂ ಬುಧವಾರ ನಗರದ ಬಾಗಲಗುಂಟೆಯಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆಯ ನೂತನ ಕಟ್ಟಡ ಹಾಗೂ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಸಮುದಾಯ ಭವನದ ಉದ್ಫಾಟನೆ ಕಾರ್ಯಕ್ರಮದಲ್ಲಿ ಭಾಗಿಯಾದ್ದರು.

ಕರ್ನಾಟಕ ರಾಜಕೀಯ ಪ್ರಹಸನ

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಗೆ ನಾನು ಪ್ರತಿಕ್ರಿಯೆ ನೀಡಿಲ್ಲ. ಅದರ ಅವಶ್ಯಕತೆ ನನಗಿಲ್ಲ. ರಾಜಕೀಯ ವಿಚಾರದಲ್ಲಿ ಚರ್ಚೆಗಳು ನಡೆಯಬೇಕಿರುವುದು ವಿಧಾನಸಭೆಯಲ್ಲಿ. ಇದರ ಬಗ್ಗೆ ಇದೇ ತಿಂಗಳ 12ರಂದು ಚರ್ಚೆ ನಡೆಯಲಿದೆ. ವಿರೋಧ ಪಕ್ಷದ ನಾಯಕರು ಕೀಳು ಮಾತುಗಳನ್ನು ಆಡಿದ್ದಾರೆ. ರಾಜಕೀಯದ ಬಗ್ಗೆ ಅಂದು ಚರ್ಚೆ ಮಾಡಲಾಗುವುದು. ಅತೃಪ್ತ ಶಾಸಕರು ತೆಗೆದುಕೊಳ್ಳುತ್ತಿರುವ ನಿರ್ಧಾರ ಅವರ ಹಾಗೂ ರಾಜ್ಯದ ಭವಿಷ್ಯಕ್ಕೆ ಮಾರಕ. ಅವರ ನಿಲುವು ಸರಿ ಇದೆಯೇ ಎಂದು ಅವರೇ ಯೋಚಿಸಲಿ ಎಂದರು.

ಇದಕ್ಕೂ ಮುನ್ನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಾಗಲಗುಂಟೆಯಲ್ಲಿ ಕಾರ್ಮಿಕರಿಗಾಗಿ .200 ಕೋಟಿ ವೆಚ್ಚದಲ್ಲಿ ಕಾರ್ಮಿಕ ಅಧ್ಯಯನ ಸಂಸ್ಥೆ ಮತ್ತು ಸಮುದಾಯ ಭವನ ಕಟ್ಟಡಗಳನ್ನು ನಿರ್ಮಾನ ಮಾಡಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯ ಕಾರ್ಮಿಕರಿಗೆ ಹಾಗೂ ಕಟ್ಟಡ ಕಾರ್ಮಿಕರಿಗೆ ಇಲಾಖೆಯಿಂದ ಸ್ಮಾರ್ಟ್‌ ಕಾರ್ಡ್‌ ವಿತರಿಸಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವ ವೆಂಕಟರಮಣಪ್ಪ ಹಾಗೂ ಇಲಾಖೆಯ ಉನ್ನತ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

click me!