
ಬೆಂಗಳೂರು [ಜು.12] : ರಾಜ್ಯ ರಾಜಕೀಯದಲ್ಲಿ ಭಾರೀ ಪ್ರಹಸನ ನಡೆಯುತ್ತಿದ್ದು, ಇದೀಗ ಸಾ ರಾ ಮಹೇಶ್, ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ.
ಬಿಜೆಪಿ ನಾಯಕರನ್ನು ಭೇಟಿ ಮಾಡಿರುವ ಸಂಬಂಧ ಮಹೇಶ್ ವಿರುದ್ಧ ಸಿಎಂ ಗರಂ ಆಗಿದ್ದು, ಇದೇ ವಿಚಾರವಾಗಿ ಚರ್ಚೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಈಶ್ವರಪ್ವ ಹಾಗೂ ಬಿಜೆಪಿ ರಾಜ್ಯ ಉಸ್ತುವಾರಿ ಮುರಳಿಧರ್ ರಾವ್ ಭೇಟಿಯ ಬಗ್ಗೆ ಸಿಎಂಗೆ ವಿವರಣೆ ನೀಡಿದ್ದಾರೆ. ಆದರೆ ಸಾ ರಾ ನಡೆ ಬಗ್ಗೆ ಸಿಎಂ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇಂತಹ ಸಂದರ್ಭದಲ್ಲಿ ನೀವು ಈ ರೀತಿಯಾಗಿ ಬೇಜವಾಬ್ದಾರಿಯಾಗಿ ನಡೆದುಕೊಂಡಿದ್ದು ಯಾಕೆಂದು ಪ್ರಶ್ನೆ ಮಾಡಿದ್ದಾರೆ.
ಮೊದಲೆ ನಮ್ಮ ಸರ್ಕಾರದ ಪರಿಸ್ಥಿತಿ ಈ ರೀತಿಯಾದ ಡೋಲಾಯಮಾನ ಸ್ಥಿತಿಯಲ್ಲಿದೆ. ನೀವು ಇನ್ನೂ ಡ್ಯಾಮೇಜ್ ಮಾಡಿದ್ದೀರಿ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.