ಸಿಎಂ ಪರಮಾಪ್ತನನ್ನು ಭೇಟಿಯಾದ ಗುಟ್ಟು ಬಿಚ್ಚಿಟ್ಟ ಬಿಜೆಪಿ ಶಾಸಕ

Published : Jul 12, 2019, 11:37 AM ISTUpdated : Jul 12, 2019, 11:41 AM IST
ಸಿಎಂ ಪರಮಾಪ್ತನನ್ನು ಭೇಟಿಯಾದ ಗುಟ್ಟು ಬಿಚ್ಚಿಟ್ಟ ಬಿಜೆಪಿ ಶಾಸಕ

ಸಾರಾಂಶ

ಸಿಎಂ ಕುಮಾರಸ್ವಾಮಿ ಪರಮಾಪ್ತ ಸಚಿವರೋರ್ವರು ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ್ದು, ಇದೀಗ ಸಾಕಷ್ಟು ಸುದ್ದಿಯಾಗುತ್ತಿದೆ. ಇದಕ್ಕೆ ಬಿಜೆಪಿಗರೇ ಕಾರಣವನ್ನೂ ನೀಡಿದ್ದಾರೆ. 

ಬೆಂಗಳೂರು [ಜು.12] : ನಾವು ಯಾವುದೇ ಕಾರಣಕ್ಕೂ ಕೂಡ ಜೆಡಿಎಸ್ ಜೊತೆಗೆ ಹೋಗುವುದಿಲ್ಲ ಎಂದು ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ. 

ಬಿಜೆಪಿ ನಾಯಕ ಈಶ್ವರಪ್ಪ, ರಾಜ್ಯ ಬಿಜೆಪಿ ಉಸ್ತುವಾರಿ ಮುರುಳಿಧರ ರಾವ್ ಅವರನ್ನು ಜೆಡಿಎಸ್ ಸಚಿವ ಸಾ ರಾ ಮಹೇಶ್ ಭೇಟಿ ಮಾಡಿದ ಬೆನ್ನಲ್ಲೇ ಪ್ರತಿಕ್ರಿಯಿಸಿದ ರೇಣುಕಾಚಾರ್ಯ ಇದೊಂದು ಆಕಸ್ಮಿಕ ಭೇಟಿ ಎಂದಿದ್ದಾರೆ. 

ಅಪ್ಪ ಮಕ್ಕಳ ಆಟ 20 -20 ಸರ್ಕಾರ ಇದ್ದಾಗಲೇ ನೋಡಿದ್ದೇವೆ.  ಕುಮಾರಸ್ವಾಮಿ ಸುಳ್ಳು ಸುದ್ದಿ ಹಬ್ಬಿಸುವುದರಲ್ಲಿ ನಿಸ್ಸೀಮರು. JDS ಶಾಸಕರನ್ನು ಹೆದರಿಸಲು  ಬಿಜೆಪಿ ಜೊತೆ ಹೊಂದಾಣಿಕೆ ಎಂದು ಬಿಂಬಿಸುತ್ತಿದ್ದಾರೆ ಎಂದರು. 

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಈ ವಿಚಾರ ಎಲ್ಲಾ ಕಾರ್ಯಕರ್ತರಿಗೂ ಬೇಸರ ತರಿಸಿದೆ. ಎಲ್ಲರೂ ಭೇಟಿ ಬಗ್ಗೆಯೇ ಕರೆ ಮಾಡಿ ಕೇಳುತ್ತಿದ್ದಾರೆ. ಇದೊಂದು ಆಕಸ್ಮಿಕ ಭೇಟಿ ಎಂದು ಸ್ಪಷ್ಟನೆ ನೀಡಿದ್ದೇನೆ ಎಂದಿದ್ದಾರೆ. 

ರಾಜ್ಯ ರಾಜಕೀಯದಲ್ಲಿ ರಾಜೀನಾಮೆ ಪ್ರಹಸನ ನಡೆಯುತ್ತಿರುವ ಬೆನ್ನಲ್ಲೇ ಈ ಭೇಟಿ ಸಾಕಷ್ಟು ಸದ್ದು ಮಾಡುತ್ತಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India News Live: IPL 2026 - ಪಂಜಾಬ್ ಕಿಂಗ್ಸ್ ಗೆಲ್ಲುತ್ತಿದ್ದಂತೆಯೇ ಪ್ಲೇ-ಆಫ್‌ ರೇಸ್‌ನಿಂದ ಹೊರಬಿದ್ದ ಮತ್ತೊಂದು ತಂಡ!
Karnataka News Live: ಮುಳ್ಳಯ್ಯನಗಿರಿಯಲ್ಲಿ ಸೃಷ್ಟಿಯಾಯ್ತು ‘ಮಿನಿ ಹಿಮಾಲಯ’ - ಮುಂಗಾರಿಗೂ ಮುನ್ನವೇ ಮಂಜಿನ ನಗರಿಯಾದ ಕಾಫಿನಾಡು!