ವಿಧಾನ ಪರಿಷತ್ ಸ್ಥಾನಕ್ಕೆ ಸಿ ಎಂ ಇಬ್ರಾಹಿಂ ಗುರುವಾರ ಅವಿರೋಧ ಆಯ್ಕೆ ಸಾಧ್ಯತೆ

By Suvarna Web DeskFirst Published Aug 22, 2017, 10:36 PM IST
Highlights

ವಿಧಾನಪರಿಷತ್‌ನಲ್ಲಿ ಖಾಲಿ ಇರುವ ಒಂದು ಸ್ಥಾನಕ್ಕೆ ಸ್ಪರ್ಧಿಸಿರುವ ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರ ಅವಿರೋಧ ಆಯ್ಕೆಯನ್ನು ಗುರುವಾರ ಪ್ರಕಟಿಸಲಾಗುತ್ತದೆ.

ಬೆಂಗಳೂರು (ಆ.22): ವಿಧಾನಪರಿಷತ್‌ನಲ್ಲಿ ಖಾಲಿ ಇರುವ ಒಂದು ಸ್ಥಾನಕ್ಕೆ ಸ್ಪರ್ಧಿಸಿರುವ ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರ ಅವಿರೋಧ ಆಯ್ಕೆಯನ್ನು ಗುರುವಾರ ಪ್ರಕಟಿಸಲಾಗುತ್ತದೆ.

ಬಿಜೆಪಿಯ ವಿಮಲಾಗೌಡ ನಿಧನದಿಂದ ತೆರವಾಗಿರುವ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಇಬ್ರಾಹಿಂ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾವುದೇ ಪಕ್ಷದಿಂದ ನಾಮಪತ್ರ ಸಲ್ಲಿಕೆಯಾಗಿಲ್ಲ. ಇಂದು ನಾಮಪತ್ರ ಪರಿಶೀಲನೆ ದಿನವಾಗಿದ್ದರಿಂದ ವಿಧಾನಸಭೆ ಅಧಿಕಾರಿಗಳು ಮಂಗಳವಾರ ಇಬ್ರಾಹಿಂ ನಾಮಪತ್ರವನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಿದರು. ಅಂತಿಮವಾಗಿ ನಾಮಪತ್ರ ಕ್ರಮಬದ್ಧವಾಗಿದೆ ಎಂದು ಚುನಾವಣಾಧಿಕಾರಿಯೂ ಆದ ವಿಧಾನಸಭೆ ಕಾರ್ಯದರ್ಶಿ ಎಸ್. ಮೂರ್ತಿ ಪ್ರಕಟಿಸಿದರು. ನಾಳೆ ಮತ್ತು ನಾಡಿದ್ದು ನಾಮಪತ್ರ ವಾಪಸ್ ಪಡೆಯಲು ಕಡೇ ದಿನವಾಗಿದ್ದು, 24 ರ ಮಧ್ಯಾಹ್ನ 3 ಗಂಟೆವರೆಗೂ ನಾಮಪತ್ರ ವಾಪಸ್ ಪಡೆಯದಿದ್ದರೆ ಇಬ್ರಾಹಿಂ ವಿಜಯಿ ಆಗಲಿದ್ದಾರೆ. ಹೀಗಾಗಿ ಗುರುವಾರ ಇಬ್ರಾಹಿಂ ಆಯ್ಕೆಯನ್ನು ಕಾರ್ಯದರ್ಶಿ ಮೂರ್ತಿ ಘೋಷಣೆ ಮಾಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

click me!