
ಬೆಂಗಳೂರು (ಏ. 19): ಪ್ರವಾಸೋದ್ಯಮ ಇಲಾಖೆ, ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಸಹಯೋಗದಲ್ಲಿ ವನ್ಯಜೀವಿ ಸಂರಕ್ಷಣಾ ಅಭಿಯಾನಕ್ಕೆ ಬೆಂಗಳೂರಿನಲ್ಲಿ ಚಾಲನೆ ನೀಡಲಾಯ್ತು.
ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರಾಜ್ ಅಭಿಯಾನದ ರಾಯಭಾರಿಯಾಗಿದ್ದು, ವನ್ಯಜೀವಿ ಸಂರಕ್ಷಣೆಯ ಮಹತ್ವವನ್ನು ನಟ ಪ್ರಕಾಶ್ರಾಜ್ ಸಾರಲಿದ್ದಾರೆ.
ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದು, ಅರಣ್ಯ ಸಚಿವ ರಮಾನಾಥ ರೈ, ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ, ನಟಿ ಭಾವನಾ, ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ ಇತರರು ಭಾಗಿಯಾಗಿದ್ದರು.
2 ತಿಂಗಳ ಕಾಲ ನಡೆಯಲಿರುವ ವನ್ಯಜೀವಿ ಸಂರಕ್ಷಣಾ ಅಭಿಯಾನದಲ್ಲಿ ಕಾಡಂಚಿನ ಗ್ರಾಮಗಳಲ್ಲಿ ಮತ್ತು ಶಾಲಾ-ಕಾಲೇಜುಗಳಲ್ಲಿ ಅಧ್ಯಯನ ಮತ್ತು ಜಾಗೃತಿ ಅಭಿಯಾನ ನಡೆಯಲಿದೆ.
ಏಪ್ರಿಲ್ 24-25ರಂದು ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಭಿಯಾನ ಶುರುವಾಗಲಿದೆ. ರಾಜ್ಯದ 5 ಹುಲಿ ಸಂರಕ್ಷಿತ ಪ್ರದೇಶ, 2 ವನ್ಯಜೀವಿಧಾಮಗಳಿಗೆ ಪ್ರಕಾಶ್ರಾಜ್ ಭೇಟಿ ನೀಡಲಿದ್ದಾರೆ. ಕಳೆದ ವರ್ಷವೂ ಸುವರ್ಣ ನ್ಯೂಸ್- ಕನ್ನಡಪ್ರಭ ವತಿಯಿಂದ ಹುಲಿ ಸಂರಕ್ಷಣಾ ಅಭಿಯಾನ ನಡೆಸಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.