ರೈತರ ಸಾಲ ಮನ್ನಾ ಹಣ ರೀಫಂಡ್: ಸ್ಪಷ್ಟನೆ ಕೊಟ್ಟ ಕುಮಾರಸ್ವಾಮಿ

By Web Desk  |  First Published Jun 11, 2019, 5:21 PM IST

ರೈತರ ಖಾತೆಗೆ ಜಮೆಯಾಗಿದ್ದ ಸಾಲ ಮನ್ನಾದ ಏಕಾಏಕಿ ಹಣ ರೀಫಂಡ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸ್ಪಷ್ಟನೆ ಏನೋ ನೀಡಿದ್ದಾರೆ. ಆದರೆ, ಸ್ಪಷ್ಟನೆಯಲ್ಲಿ ಮಾಧ್ಯಮಗಳ ಮೇಲೆಯೇ ಗೂಬೆ ಕೂರಿಸಿದ್ದಾರೆ.


ಬೆಂಗಳೂರು, (ಜೂನ್.11): ರೈತರ ಖಾತೆಗೆ ಜಮೆಯಾಗಿದ್ದ ಸಾಲ ಮನ್ನಾದ ಹಣ ಏಕಾಏಕಿ  ರೀಫಂಡ್ ಆಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿ ಅವರು ಸ್ಪಷ್ಟನೆ ನೀಡಿದ್ದಾರೆ. 

"

Tap to resize

Latest Videos

ಯಾದಗಿರಿ ರೈತರ ಖಾತೆಗೆ ಜಮೆಯಾಗಿದ್ದ ಸಾಲ ಮನ್ನಾದ ಹಣ ರೀಫಂಡ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಮತ್ತೆ ಮಾಧ್ಯಮಗಳ ಮೇಲೆಯೇ ಗೂಬೆ ಕೂರಿಸಿದ್ದಾರೆ.

"

"

ಯಾದಗಿರಿ ಜಿಲ್ಲೆಯ ರಾಷ್ಟ್ರೀಕೃತ ಬ್ಯಾಂಕುಗಳು ರೈತರ ಸಾಲಗಳ ವರ್ಗೀಕರಣ ಮಾಡುವಲ್ಲಿ ಆಗಿರುವ ಲೋಪದಿಂದಾಗಿ ಈ ಗೊಂದಲ ಉಂಟಾಗಿದೆ. ಪ್ರತಿ ಸಾಲ ಮನ್ನಾ ನಂತರ ರಾಜ್ಯ ಸರ್ಕಾರ ನಡೆಸುವ ಆಡಿಟ್ ಸಂದರ್ಭದಲ್ಲಿ ಈ ವಿಷಯ ಬೆಳಕಿಗೆ ಬಂದಿದೆ. 

ಈ ವರೆಗೆ 13,988 ರೈತರ ಸಾಲ ಖಾತೆಗಳಲ್ಲಿ ಈ ಗೊಂದಲ ಉಂಟಾಗಿದೆ. ಸ್ಥಳೀಯ ಬ್ಯಾಂಕುಗಳು ತಮ್ಮಿಂದ ಆಗಿರುವ ಲೋಪದ ಕುರಿತು ಸ್ಪಷ್ಟನೆ ನೀಡುವಂತೆ ಸೂಚಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಶುಕ್ರವಾರ, ಜೂನ್ 14ರಂದು ಮಧ್ಯಾಹ್ನ 2.30 ಗಂಟೆಗೆ ರಾಜ್ಯ ಮಟ್ಟದ ಬ್ಯಾಂಕರುಗಳ ಸಭೆ ಕರೆಯಲಾಗಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

click me!