ಮಾಜಿ ಶಾಸಕ ವಿಜಯಕುಮಾರ್ ಖಂಡ್ರೆ ನಿಧನ : ಮುಖ್ಯಮಂತ್ರಿ ಸಂತಾಪ

Published : Apr 29, 2019, 02:14 PM IST
ಮಾಜಿ ಶಾಸಕ ವಿಜಯಕುಮಾರ್ ಖಂಡ್ರೆ ನಿಧನ : ಮುಖ್ಯಮಂತ್ರಿ ಸಂತಾಪ

ಸಾರಾಂಶ

ಮಾಜಿ ಶಾಸಕ ವಿಜಯ್ ಕುಮಾರ್ ಖಂಡ್ರೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದು, ಖಂಡ್ರೆ ನಿಧನಕ್ಕೆ ಸಿಎಂ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. 

ಭಾಲ್ಕಿ :  ಮಾಜಿ ಶಾಸಜ ವಿಜಯ್ ಕುಮಾರ್ ಖಂಡ್ರೆ [60] ತೀವ್ರ ಹೃದಯಾಘಾತದಿಂದ ನಿಧನರಾಗಿದ್ದು, ಖಂಡ್ರೆ ನಿಧನಕ್ಕೆ ಸಿಎಂ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. 

ಅಧಿಕಾರದ ಅವಧಿಯಲ್ಲಿ ಜನಾನುರಾಗಿ ಶಾಸಕರೆಂದೇ ಜನಪ್ರಿಯರಾಗಿದ್ದ ಅವರ ನಿಧನದಿಂದ ತುಂಬಲಾರದ ನಷ್ಟವಾಗಿದೆ.  ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬವರ್ಗ ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಹೇಳಿದ್ದಾರೆ.

ಮಾಜಿ ಶಾಸಕ ಡಾ. ವಿಜಯಕುಮಾರ ಖಂಡ್ರೆ ವರಿಗೆ ತೀವ್ರ ಹೃದಯಾಘಾತವಾಗಿದ್ದು,ಈನಿಟ್ಟಿನಲ್ಲಿ ಅವರನ್ನು ಖಾಸಗಿಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಖಂಡ್ರೆ ಸೋಮವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ.

ಭಾಲ್ಕಿ ವಿಧಾನಸಭೆ ಕ್ಷೇತ್ರದಿಂದ 1989ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ  ಹಾಗೂ 1994ರಲ್ಲಿ  ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.  ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ಹಿರಿಯ ಪುತ್ರ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರ ಸಹೋದರರಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bengaluru: ಫ್ರೀಡಂ ಪಾರ್ಕ್‌ನಲ್ಲಿ ಕೈಗೆ ಕೋಳ ಹಾಕಿಕೊಂಡು 'STOP killing Men' ಪ್ರತಿಭಟನೆ ಮಾಡಿದ ಪುರುಷರು!
ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ