ಅಂಡಮಾನ್​​ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ 50 ಕನ್ನಡಿಗರಿಗೆ ಸಿಎಂ ಸಹಾಯ ಹಸ್ತ

By Kannadaprabha News  |  First Published May 4, 2019, 9:36 PM IST

ಸಂಕಷ್ಟಕ್ಕೆ ಸಿಲುಕಿದ್ದ ಕನ್ನಡಿಗರಿಗೆ ಮುಖ್ಯಮಂತ್ರಿಗಳ ಸಹಾಯಹಸ್ತ| ಪ್ರವಾಸದ ನಿಮಿತ್ತ ಅಂಡಮಾನ್ ಮತ್ತು  ನಿಕೋಬಾರ್​ಗೆ ತೆರಳಿ ವಿಮಾನ ಲಭ್ಯತೆ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದ ಸುಮಾರು 50 ಮಂದಿ ಕನ್ನಡಿಗರು.


ಬೆಂಗಳೂರು, [ಮೇ.04]: ಪ್ರವಾಸದ ನಿಮಿತ್ತ ಅಂಡಮಾನ್ ಮತ್ತು ನಿಕೋಬಾರ್​ಗೆ ತೆರಳಿ ವಿಮಾನ ಲಭ್ಯತೆ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದ ಸುಮಾರು 50 ಮಂದಿ ಕನ್ನಡಿಗರಿಗೆ ರಾಜ್ಯ ಸರ್ಕಾರ ನೆರವಾಗಿದೆ.

 ಪ್ರವಾಸದಲ್ಲಿದ್ದ ಮೂಡಿಗೆರೆಯ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಶಶಿಕಲಾ ಅವರು ತಮ್ಮ ಸಮಸ್ಯೆಯನ್ನು ದೂರವಾಣಿ ಮೂಲಕ ಇಂದು ಮುಖ್ಯಮಂತ್ರಿ ಕಚೇರಿಯ ಗಮನಕ್ಕೆ ತಂದಿದ್ದರು.

Tap to resize

Latest Videos

ಈ ವಿಷಯವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಗಮನಕ್ಕೆ ಬಂದಿದ್ದು, ಕೂಡಲೇ ಪರಿಸ್ಥಿತಿಯನ್ನು ನಿಭಾಯಿಸಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರಿಗೆ ಸಹಾಯ ಮಾಡುವಂತೆ ತಮ್ಮ ಮುಖ್ಯ ಕಾರ್ಯದರ್ಶಿ ಹಾಗೂ ದೆಹಲಿಯಲ್ಲಿರುವ ಸ್ಥಾನಿಕ ಆಯುಕ್ತರಿಗೆ ಸಿಎಂ ಸೂಚಿಸಿದರು. 

ಸಿಎಂ ಸೂಚನೆ ಮೇರೆಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿದ ದೆಹಲಿಯ ಸ್ಥಾನಿಕ ಆಯುಕ್ತರು ಸಮಸ್ಯೆಯನ್ನು ಬಗೆಹರಿಸಿದ್ದು, ನಾಳೆ [ಭಾನುವಾರ] ಬೆಳಗಿನ ವಿಮಾನದಲ್ಲಿ ಬೆಂಗಳೂರಿಗೆ ಹಿಂದಿರುಗಲು ವ್ಯವಸ್ಥೆ ಕಲ್ಪಿಸಿದ್ದಾರೆ.

click me!