
ವಿಧಾನಸಭೆ : ಕೃಷಿ ಪಂಪ್‌ಸೆಟ್‌ಗಳಿಗೆ ಆರ್‌ಆರ್ ಸಂಖ್ಯೆ ಪಡೆಯಲು ಪಾವತಿಸಬೇಕಿರುವ 10 ಸಾವಿರ ರು. ಶುಲ್ಕವನ್ನು ಕೈಬಿಡುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.
ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ರಾಜೂಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ನೋಂದಣಿ ಪಡೆಯಬೇಕಾದರೆ 10 ಸಾವಿರ ರು. ಸೇವಾ ಶುಲ್ಕ ವಿಧಿಸಲಾಗುತ್ತಿದೆ. ಏಕೆಂದರೆ, ಇಂತಹದೊಂದು ಸಂಪರ್ಕ ಕಲ್ಪಿಸಲು ವಿದ್ಯುತ್ ಕಂಪನಿಗಳಿಗೆ ಒಂದು ಲಕ್ಷ ರು. ವೆಚ್ಚವಾಗುತ್ತಿದ್ದು, ಅಷ್ಟುಮೊತ್ತವನ್ನು ರೈತರು ನೀಡಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ 10 ಸಾವಿರ ರು. ಮಾತ್ರ ಶುಲ್ಕ ವಿಧಿಸಲಾಗುತ್ತಿದೆ. ಈ ಮೊತ್ತವನ್ನು ಕೂಡ ಕೈಬಿಡಬೇಕು ಎಂದು ಶಾಸಕರ ಒತ್ತಾಯವಿದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಇದೇ ವೇಳೆ ಮಲೆನಾಡು ಭಾಗದ ಹಲವು ಶಾಸಕರು ತೀವ್ರ ಮಳೆಯಿಂದ ವಿದ್ಯುತ್ ಕಂಬಗಳು ಬೀಳುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದರು. ಇದಕ್ಕೆ ಅರಣ್ಯ ಇಲಾಖೆಯು ಮರಗಳನ್ನು ಕಡಿಯಲು ಅವಕಾಶ ನೀಡದಿರುವುದೇ ಕಾರಣ. ಹೀಗಾಗಿ ಅರಣ್ಯ ಇಲಾಖೆ , ವಿದ್ಯುತ್ ಇಲಾಖೆ ಹಾಗೂ ಮಲೆನಾಡು ಭಾಗದ ಶಾಸಕರ ಸಭೆಯೊಂದನ್ನು ಕರೆದು ಸಮಸ್ಯೆ ಬಗ್ಗೆ ಕೂಲಂಕಷ ಚರ್ಚೆ ನಡೆಸಬೇಕು ಎಂದು ಆಗ್ರಹಿಸಿದರು. ಇದಕ್ಕೆ ಕುಮಾರಸ್ವಾಮಿ ಒಪ್ಪಿದ್ದು, ಅಧಿವೇಶನದ ನಂತರ ಸಭೆ ಕರೆಯುವುದಾಗಿ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.